ಬೆಂಗಳೂರು: ‘ಪೂಜೆ ನಂತರ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ 5ನೇ ಹಂತದ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್ನವರು ಹೆಸರು ಪಡೆದುಕೊಳ್ಳುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಬುಧವಾರ ದೂರಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಯೋಜನೆ ರೂಪಿಸಿದ್ದು, ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ. 2018ರ ಜನವರಿ 24ರಂದು ಯೋಜನೆಗೆ ₹5,500 ಕೋಟಿ ಸಾಲ ಪಡೆಯಲು ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆಗ ಕಾಮಗಾರಿಗೆ 90 ತಿಂಗಳ ಗಡುವು ವಿಧಿಸಲಾಗಿತ್ತು‘ ಎಂದರು.

‘2019ರ ಜನವರಿ 1ರಂದು ಯೋಜನೆಯ ಕಾಮಗಾರಿ ಆರಂಭವಾಗಿತ್ತು. ಆಗಲೂ ಬಿಜೆಪಿ ಸರ್ಕಾರವೇ ಇತ್ತು. ಪ್ಯಾಕೇಜ್ 2ರಲ್ಲಿ ನಿತ್ಯ 77.5 ಕೋಟಿ ಲೀಟರ್ ನೀರು ಶುದ್ಧೀಕರಣ ಘಟಕ, ಪ್ಯಾಕೇಜ್ 3ರಲ್ಲಿ ಟಿ.ಕೆ.ಹಳ್ಳಿ ಪಂಪಿಂಗ್ ಘಟಕ, ಪ್ಯಾಕೇಜ್ 4ರಲ್ಲಿ ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿ ಎರಡು ಪಂಪಿಂಗ್ ಸ್ಟೇಷನ್, ಪ್ಯಾಕೇಜ್ 7ರಲ್ಲಿ ಟಿ.ಕೆ.ಹಳ್ಳಿ-ಹಾರೋಹಳ್ಳಿ ಪೈಪ್ಲೈನ್, ಪ್ಯಾಕೇಜ್ 8ರಲ್ಲಿ ಹಾರೋಹಳ್ಳಿ-ವಾಜರಹಳ್ಳಿ ಪೈಪ್ಲೈನ್, ಪ್ಯಾಕೇಜ್ 10ರಲ್ಲಿ ಪಶ್ಚಿಮ ಭಾಗದಲ್ಲಿ ಪೈಪ್ಲೈನ್, ಪ್ಯಾಕೇಜ್ 12 ರಲ್ಲಿ ಪೂರ್ವ ಭಾಗದಲ್ಲಿ ನೆಲಮಟ್ಟದ ಜಲ ಸಂಗ್ರಹಾಗಾರ, ಪ್ಯಾಕೇಜ್ 13ರಲ್ಲಿ ಪಶ್ಚಿಮ ಭಾಗದಲ್ಲಿ ನೆಲಮಟ್ಟದ ಜಲ ಸಂಗ್ರಹಾಗಾರ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು’ ಎಂದು ವಿವರಿಸಿದರು.
.ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ .
‘ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಕಾಮಗಾರಿ ಶೇ 80ರಷ್ಟು ಮುಗಿದಿತ್ತು. ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ 110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಸಿದ್ದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.