ಬೆಂಗಳೂರು: ‘ಓಲಾ, ಉಬರ್ ಸೇರಿದಂತೆ ಬಾಡಿಗೆ ಟ್ಯಾಕ್ಸಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೂಚನೆ ನೀಡಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಹೈದರಾಬಾದ್‍ನಲ್ಲಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಓಲಾ, ಉಬರ್, ಖಾಸಗಿ ಟ್ಯಾಕ್ಸಿಗಳಿಗೆ ವಿದೇಶಗಳಲ್ಲಿ ಇರುವಂತೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಲಾಗುವುದು’ ಎಂದರು.

‘ಮಹಿಳೆಯರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕ್ಯಾಬ್‍ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ, ಜಿಪಿಎಸ್, ತುರ್ತು ಬಟನ್ ಅಳವಡಿಸುವುದು ಕಡ್ಡಾಯ. ವಿದೇಶಗಳಲ್ಲಿ ಈಗಾಗಲೇ ವ್ಯವಸ್ಥೆ ಇದೆ’ ಎಂದು ಅವರು ಹೇಳಿದರು.

‘ಹೈದರಾಬಾದಿನಲ್ಲಿ ನಡೆದ ಘಟನೆಯ ಬಳಿಕ ಬೆಂಗಳೂರು ನಗರ ಪೊಲೀಸರು ನಿರ್ಮಿಸಿದ್ದ ಸುರಕ್ಷಾ ಆ್ಯಪ್‍ಗೆ ಹೆಚ್ಚಿನ ಬೇಡಿಕೆ ಬಂದಿದೆ’ ಎಂದೂ ಕಮಿಷನರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.