ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಬ್ರ್ಯಾಂಡ್‌ ಬೆಂಗಳೂರು’ಗೆ ಕೇಂದ್ರ ಸರ್ಕಾರದ ನೆರವೂ ಅಗತ್ಯ: ಉಮಾಶಂಕರ್‌

Published 12 ಜೂನ್ 2024, 16:18 IST
Last Updated 12 ಜೂನ್ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ಹೆಸರಿಗೆ ತಕ್ಕಂತೆ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರದ ನೆರವೂ ಅಗತ್ಯ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್‌ ಹೇಳಿದರು.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಅವರು ಹೆಚ್ಚುವರಿಯಾಗಿ ಆಡಳಿತಾಧಿಕಾರಿ ಹುದ್ದೆಯನ್ನು ಬುಧವಾರ ವಹಿಸಿಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು. 

‘ಬ್ರ್ಯಾಂಡ್‌ ಬೆಂಗಳೂರು ಹೆಸರಿಗೆ ತಕ್ಕಂತೆ ಮೂಲಸೌಕರ್ಯ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಈ ನಿಟ್ಟಿನಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಉದ್ದೇಶ. ನಗರದಿಂದ ಸಾಕಷ್ಟು ಕಾರ್ಪೊರೇಟ್‌ ತೆರಿಗೆ ಸಂಗ್ರಹವಾಗುತ್ತಿದೆ. ಹೀಗಾಗಿ, ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನೆರವೂ ಅಗತ್ಯ’ ಎಂದರು.

‘ನಗರದ ವ್ಯಾಪ್ತಿಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು. ಮಳೆಗಾಲದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಡೆಯಬೇಕು. ಇದಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಗಳೂ ಆಗಿವೆ. ಬೃಹತ್‌ ಮಳೆ ನೀರುಗಾಲುವೆ ಕೆಲಸ ನಗರದಲ್ಲಿ ಪೂರ್ಣಗೊಂಡಿಲ್ಲ. 330 ಕಿ.ಮೀನಷ್ಟು ರಾಜಕಾಲುವೆ ನಿರ್ಮಾಣವಾದರೆ ಶಾಶ್ವತ ಪರಿಹಾರ ಸಿಗಬಹುದು’ ಎಂದರು.

ಉಮಾಶಂಕರ್‌ ಅವರು ಪಾಲಿಕೆ 29ನೇ ಆಡಳಿತಾಧಿಕಾರಿಯಾಗಿದ್ದಾರೆ. ಈ ಹಿಂದೆ ರಾಕೇಶ್‌ ಸಿಂಗ್‌ ಅವರು ಮೂರು ವರ್ಷ ಆಡಳಿತಾಧಿಕಾರಿಯಾಗಿದ್ದು, ಈವರೆಗಿನ ಅತಿ ಹೆಚ್ಚಿನ ಅವಧಿಯ ಅವರದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT