ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ- ಮದಾವರ ನಡುವೆ ವಾಣಿಜ್ಯ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಯಾವುದೇ ಶಿಷ್ಟಾಚಾರಕ್ಕೆ ಕಾಯದೇ ಸಾಂಕೇತಿಕವಾಗಿ ಉದ್ಘಾಟನೆ ಮಾಡಿ, ರೈಲು ಸಂಚಾರ ಆರಂಭಿಸುವಂತೆ ಸೂಚನೆ ಬಂದಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

'ಮಾದಾವರಕ್ಕೆ ವಾಣಿಜ್ಯ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ತಿಳಿಸಿದೆ. ಭದ್ರತಾ ಸಿಬ್ಬಂದಿ ನಿಯೋಜನೆ, ಟಿಕೆಟ್ ನೀಡುವ ವ್ಯವಸ್ಥೆ, ರೈಲು ಸಂಚಾರದ ವೇಳಾಪಟ್ಟಿ ತಯಾರಿ ಸಹಿತ ಎಲ್ಲ ತಯಾರಿಗಳನ್ನು ಮಾಡಿ ಎರಡು-ಮೂರು ದಿನಗಳಲ್ಲಿ ಸಂಚಾರ ಆರಂಭಿಸಲಾಗುವುದು' ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಇಂದೇ ಆರಂಭ: ತೇಜಸ್ವಿ ಸೂರ್ಯ

ಸಾರ್ವಜನಿಕರ ಅನುಕೂಲ ಮತ್ತು ಹಿತಾಸಕ್ತಿ ಗಮನದಲ್ಲಿ ಇರಿಸಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಗಸಂದ್ರ - ಮಾದಾವರ ನಡುವೆ ರೈಲು ಸಂಚಾರ ಆರಂಭಿಸಲು ಅನುಮತಿ ನೀಡಿದ್ದಾರೆ. ಬುಧವಾರ ಸಾರ್ವಜನಿಕ ಸೇವೆಗೆ ತೆರೆದುಕೊಳ್ಳಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.