ಬೆಂಗಳೂರು: ದರೋಡೆ, ಸುಲಿಗೆ, ಹಲ್ಲೆ, ಕಳವು, ಮಾರಕಾಸ್ತ್ರಗಳಿಂದ ಜೀವ ಬೆದರಿಕೆ ಸೇರಿದಂತೆ ಹಲವು ಅಪರಾಧಗಳಲ್ಲಿ ನಿರಂತರವಾಗಿ ಸಕ್ರಿಯವಾಗಿದ್ದ ಆರೋಪದಡಿ ಚಂದ್ರಾ ಬಡಾವಣೆಯ ರೌಡಿಶೀಟರ್ ಎ.ಅಬ್ದುಲ್ಲಾನನ್ನು (28) ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

‘ಚಂದ್ರಾ ಬಡಾವಣೆಯಲ್ಲಿ ವಾಸವಿದ್ದ ಆರೋಪಿ, 2017ರಿಂದ ವಿಜಯನಗರ, ಅನ್ನಪೂರ್ಣೇಶ್ವರಿನಗರ, ಬ್ಯಾಟರಾಯನಪುರ ಹಾಗೂ ಚಂದ್ರಾ ಬಡಾವಣೆಯ ಠಾಣೆಗಳಲ್ಲಿ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದು, ಅಪರಾಧ ಚಟುವಟಿಕೆಗಳಲ್ಲಿ ಮುಂದುವರಿದಿದ್ದ’ ಎಂದು ಪೊಲೀಸರು ತಿಳಿಸಿದರು.

‘ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದ್ದಅಬ್ದುಲ್ಲಾನನ್ನು ಬಂಧಿಸಲು ನಗರ ಪೊಲೀಸ್ ಕಮಿಷನರ್‌ಗೆ ವರದಿ ಸಲ್ಲಿಸಲಾಗಿತ್ತು. ಅವರ ಆದೇಶದ ಮೇರೆಗೆಗೂಂಡಾ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ’ ಎಂದೂ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.