ಬೆಂಗಳೂರು: ‘ಯೋಗೇಶ್ವರ್ ಅವರ ಸಿನಿಮಾ ನಟ, ಕಲೆಗಾರ, ಯಾವ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳುತ್ತಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಯೋಗೇಶ್ವರ್ ಅವರಿಗೆ ಅವರದೇ ಆದ ಟ್ರಿಕ್ ಇದೆ. ಅವರು ಸೋಲುವುದಾಗಿ ಎಲ್ಲಿಯೂ ಹೇಳಿಲ್ಲ.’ ಎಂದರು.
.ಸರ್ಕಾರದ ಸಂಖ್ಯಾಬಲ 138 ಆಗಿದೆ, ಬೇರೆ ಲೆಕ್ಕಾಚಾರದ ಬಗ್ಗೆ ಮಾತನಾಡುವುದಿಲ್ಲ: ಡಿಕೆ.
ಕುಮಾರಸ್ವಾಮಿ ನಿರ್ಮಾಪಕರಾದರೆ, ಯೋಗೇಶ್ವರ್ ನಟ. ನಿಖಿಲ್ ಕುಮಾರಸ್ವಾಮಿ ಕೂಡ ನಟ. ಕುಮಾರಸ್ವಾಮಿ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳಿದಾಗ, ಅಪ್ಪಾ ನಾನು ಜನರ ಮಧ್ಯೆ ಇದ್ದೇನಪ್ಪಾ ಎಂದು ಹೇಳಿದ್ದು ನಾನು ನೋಡಿದ್ದೇನೆ' ಎಂದು ಹೇಳಿದ್ದಾರೆ.

'ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆಯ ಫಲಿತಾಂಶದ ಮೂಲಕ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ’ ಎಂದಿದ್ದಾರೆ.
.ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆ ಮೂಲಕ ಮತದಾರರ ಉತ್ತರ: ಡಿಕೆಶಿ.
'ಈ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯುವುದಿಲ್ಲ., ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.
.2028ರಲ್ಲಿಯೂ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ: ಡಿ.ಕೆ. ಶಿವಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.