ಬೆಂಗಳೂರು: ಹೆಣ್ಣೂರು ಕ್ರಾಸ್ ಬಳಿ ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದು ತಾಯಿ–ಮಗು ಮೃತಪಟ್ಟಿದ್ದ ಪ್ರಕರಣ ಸಂಬಂಧ ಗೋವಿಂದಪುರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದಾರೆ.

ನಿರ್ಮಾಣ ಹಂತದ ಪಿಲ್ಲರ್ನ ಕಬ್ಬಿಣದ ಚೌಕಟ್ಟು ಜ. 10ರಂದು ಉರುಳಿ ಬಿದ್ದಿತ್ತು. ಬೈಕ್ನಲ್ಲಿ ಹೊರಟಿದ್ದ ತೇಜಸ್ವಿನಿ ಸುಲಾಖೆ (28) ಹಾಗೂ ಅವರ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದರು. ಪತಿಗೆ ಗಾಯವಾಗಿತ್ತು.

ದುರಂತದ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು, ಬಿಎಂಆರ್ಸಿಎಲ್ ಹಾಗೂ ನಾಗಾರ್ಜುನ್ ಕನ್ಸ್ಟ್ರಕ್ಷನ್ ಕಂಪನಿ (ಎನ್ಸಿಸಿ) 11 ಅಧಿಕಾರಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

'ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಾಗೂ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ತಜ್ಞರ ವರದಿ, ವಿಧಿ ವಿಜ್ಞಾನ ಪ್ರಯೋಗಾಯದ ವರದಿ ಹಾಗೂ ಇತರೆ ಪುರಾವೆಗಳನ್ನು ಸಂಗ್ರಹಿಸಿ 1100 ಪುಟಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ' ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.