ಬೆಂಗಳೂರು: ‘ನಿರ್ಮಾಪಕ ಕೆ.ಮಂಜು ಅವರಿಂದ ಪಡೆದಿದ್ದ ₹ 20 ಲಕ್ಷ ಮೊತ್ತದ ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ಗಳು ಬೌನ್ಸ್ ಆದ ಪ್ರಕರಣದಲ್ಲಿ,ತಕ್ಷಣ ಹಣ ಹಿಂದಿರುಗಿಸದೇ ಹೋದರೆ ಆರೋಪಿ ಕಿಶೋರ್ ಆರು ತಿಂಗಳ ಸಾದಾ ಜೈಲು ಶಿಕ್ಷೆಗೆ ಗುರಿಯಾಗಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಹೊಸಪೇಟೆಯ ಕಿಶೋರ್ ಸಲ್ಲಿಸಿದ್ದ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದ್ದು, ವಿಚಾರಣಾ ನ್ಯಾಯಾ ಲಯದ ಶಿಕ್ಷೆ ಕಾಯಂಗೊಳಿಸಿದೆ.

ಪ್ರಕರಣವೇನು?: ಕಿಶೋರ್ ಅವರು ‘ರುದ್ರಮದೇವಿ’ ತೆಲುಗು ಚಿತ್ರದ ಬಿಡುಗಡೆಗಾಗಿ ಕೆ.ಮಂಜು ಅವರಿಂದ 2015ರ ಜುಲೈನಲ್ಲಿ ₹ 20 ಲಕ್ಷ ಕೈಗಡ ಪಡೆದು ಮುಂದಿನ ಎರಡು ತಿಂಗಳಲ್ಲಿ ಹಿಂದಿರುಗಿಸುವುದಾಗಿ ತಿಳಿಸಿದ್ದರು. ಇದಕ್ಕೆ ಪ್ರತಿಯಾಗಿ ಎರಡು ಚೆಕ್ಗಳನ್ನು ನೀಡಿದ್ದರು.

ಅವಧಿ ಮೀರಿದರೂ ಕಿಶೋರ್ ಹಣ ಹಿಂದಿರುಗಿಸಿರಲಿಲ್ಲ. ಈ ಸಂಬಂಧ ಮಂಜು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಎನ್.ಐ ಕಾಯ್ದೆ–1881ರ ಕಲಂ 138ರ ಅನುಸಾರ ಕಿಶೋರ್ ತಪ್ಪಿತಸ್ಥರು ಎಂದು ವಿಚಾರಣಾ ನ್ಯಾಯಾಲಯ ಘೋಷಿಸಿತ್ತು. ಇದನ್ನು ಪ್ರಶ್ನಿಸಿ ಕಿಶೋರ್ 69ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಸೆಷನ್ಸ್ ನ್ಯಾಯಾಲಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.