ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಧು ಬಂಗಾರಪ್ಪ ಸಲ್ಲಿಸಿದ್ದ ಮೇಲ್ಮನವಿಯನ್ನು ಬೆಂಗಳೂರು ನಗರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸಿತು.

‘ದೂರುದಾರರಿಗೆ ಪಾವತಿಸಬೇಕಾದ ಮೊತ್ತದಲ್ಲಿ ಶೇ 20ರಷ್ಟು ಮೊತ್ತವನ್ನು ಠೇವಣಿಯಾಗಿ ಇರಿಸಬೇಕು. ₹50 ಸಾವಿರ ಬಾಂಡ್, ಒಬ್ಬರ ಭದ್ರತೆ ಒದಗಿಸಬೇಕು. ಒಂದು ತಿಂಗಳ ಒಳಗೆ ಈ ಷರತ್ತು ಪಾಲಿಸಬೇಕು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಕರಣದಲ್ಲಿ ದೂರುದಾರರಾಗಿದ್ದ ರಾಕೇಶ್ ಎಕ್ಸ್ಪೋರ್ಟ್ ಸಂಸ್ಥೆಗೆ ₹ 6.96 ಕೋಟಿ ಹಾಗೂ ಸರ್ಕಾರದ ಸಕ್ಷಮ ಸಂಸ್ಥೆಗೆ ₹ 10 ಸಾವಿರ ಪಾವತಿಸಬೇಕು. ತಪ್ಪಿದ್ದಲ್ಲಿ 6 ತಿಂಗಳು ಸಾದಾ ಸಜೆ ಅನುಭವಿಸಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.