ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ರಚನೆಯಾಗಿರುವ 50 ಹೊಸ ತಾಲ್ಲೂಕುಗಳಿಗೆ ವಿವಿಧ ಇಲಾಖೆಗಳ ಕಚೇರಿಗಳನ್ನು ಮಂಜೂರು ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಎಂ.ಬಿ.ಪ್ರಕಾಶ್ ವರದಿಯ ಅನ್ವಯ ಹೊಸದಾಗಿ ರಚನೆಯಾದ ತಾಲ್ಲೂಕುಗಳಲ್ಲಿ ಕನಿಷ್ಟ 14 ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಇವುಗಳನ್ನು ಬಿಟ್ಟು ಉಳಿದ ಇಲಾಖೆಗಳ ತಾಲ್ಲೂಕು ಮಟ್ಟದ ಕಚೇರಿಗಳನ್ನು ಸ್ಥಾಪಿಸಲು ಅನುಮತಿ ನೀಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿಯೂ ಕುಮಾರಸ್ವಾಮಿ ಭರವಸೆ ನೀಡಿದರು.

ಇನ್ನೂ ಕೆಲವು ಕಡೆಗಳಲ್ಲಿ ಹೊಸ ತಾಲ್ಲೂಕುಗಳನ್ನು ರಚಿಸುವ ಬಗ್ಗೆ ಬಂದಿರುವ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಸೂಚನೆ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣದಲ್ಲಿ 2018ರ ಜೂನ್ ಅಂತ್ಯದವರೆಗೆ 35 ಪ್ರಕರಣಗಳಿಗೆ ₹ 5 ಲಕ್ಷ ಪರಿಹಾರ ನೀಡಲಾಗಿದೆ. ಆ ಬಳಿಕ ಆಗಸ್ಟ್ ಕೊನೆಯ ವೇಳೆಗೆ 114 ಪ್ರಕರಣಗಳಲ್ಲಿ ಪರಿಹಾರ ನೀಡಲಾಯಿತು ಎಂದರು.

ರಾಜ್ಯದಲ್ಲಿ ಒಟ್ಟು 2742 ಕಂದಾಯ ಗ್ರಾಮಗಳನ್ನು ರಚಿಸಬೇಕಾಗಿದ್ದು, ಇದರಲ್ಲಿ 1413 ಕಂದಾಯ ಗ್ರಾಮಗಳ ರಚನೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವಿವಿಧ ಐದು ಸೇವೆಗಳನ್ನು ಆನ್ಲೈನ್ನಲ್ಲಿ ಒದಗಿಸಲು ಸಿದ್ಧತೆ ನಡೆದಿದ್ದು, ಈ ಬಗ್ಗೆ ಕಾನೂನು ಇಲಾಖೆಯ ಸಲಹೆ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.