ಬೆಂಗಳೂರು: ನಗರದಲ್ಲಿ ಬುಧವಾರ ನಡೆದ ಸಿ.ಎಂ.ಆರ್. ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 32 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.

ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಾಧಕರಿಗೆ ಪದವಿ ಪ್ರಮಾಣಪತ್ರ ಪ್ರದಾನ ಮಾಡಿದರು. 41 ಅಭ್ಯರ್ಥಿಗಳಿಗೆ ಪಿಎಚ್.ಡಿ. ಪದವಿ ಪ್ರದಾನ ಮಾಡಲಾಯಿತು.

2023ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದ 1895 ವಿದ್ಯಾರ್ಥಿಗಳಿಗೆ ಸಿ.ಎಂ.ಆರ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಕೆ.ಸಿ.ರಾಮಮೂರ್ತಿ ಮತ್ತು ಸಿ.ಎಂ.ಆರ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಸಬಿತಾ ರಾಮಮೂರ್ತಿ ಪದವಿ ಪ್ರಮಾಣಪತ್ರ ಪ್ರದಾನ ಮಾಡಿದರು.

ಶಿಕ್ಷಣ ಕ್ಷೇತ್ರ ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿ ಮತ್ತು ಸೇವೆ ಪರಿಗಣಿಸಿ ದಕ್ಷಿಣ ಕೊರಿಯಾದ ಕೊರಿಯನ್ ರಾಷ್ಟ್ರೀಯ ಕ್ರೀಡಾ
ವಿಶ್ವವಿದ್ಯಾಲಯದ ಅಧ್ಯಕ್ಷ ಪ್ರೊಫೆಸರ್ ಯೊಂಗ್ ಕ್ಯು ಅಹ್ನಾ ಅವರಿಗೆ ಘಟಿಕೋತ್ಸವದಲ್ಲಿ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು

ಕುಲಪತಿ ಡಾ.ಎಚ್.ಬಿ.ರಾಘವೇಂದ್ರ ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಮಂಡಿಸಿದರು.

ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ.ಕೆ. ಮಾರಾರ್, ಸಿ.ಎಂ.ಆರ್ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಕೆ.ಆರ್. ಜಯದೀಪ್, ಪ್ರೊವೊಸ್ಟ್ ಡಾ.ತ್ರಿಸ್ತಾ ರಾಮಮೂರ್ತಿ, ಕುಲಸಚಿವ ಡಾ.ಪ್ರವೀಣ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.