ಬೆಂಗಳೂರು:ಸಿ.ಎಂ.ಆರ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವದಲ್ಲಿಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 17 ವಿದ್ಯಾರ್ಥಿಗಳಿಗೆ 18 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.

ನಗರದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿಎಂ.ಕಾಂ ವಿಭಾಗದಲ್ಲಿ ಉನ್ನತ ಶ್ರೇಣಿ ಪಡೆದ ಪ್ರಿಯಾದರ್ಶಿನಿ ಸಿ.ಎಂ.ಆರ್ ಚಿನ್ನದ ಪದಕ ಮತ್ತು ಐಎಸ್ಡಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು.

ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರುಮೂವರಿಗೆಡಾಕ್ಟರೇಟ್, 198 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 216 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಚಿತ್ರನಟ ವಿ. ರವಿಚಂದ್ರನ್ ಅವರಿಗೆಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

‘ದೇಶದ ಮಹಾನಗರಗಳಲ್ಲಿ ಬೆಂಗಳೂರು ಗುರುತಿಸಿಕೊಂಡಿದ್ದು, ಐಟಿ ಬಿಟಿ ಕ್ಷೇತ್ರದಲ್ಲಿ ಹೆಸರು ಮಾಡಿದೆ. ಗುಣಾತ್ಮಕ ಶಿಕ್ಷಣ ನೀಡುವ ವಿಶ್ವವಿದ್ಯಾಲಯಗಳು ಬರಬೇಕು. ಮನೆ ಕಟ್ಟಲು ತಳಪಾಯ ಹೇಗೆ ಮುಖ್ಯವೋ ಹಾಗೆಯೇ ಪ್ರತಿ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ಅಗತ್ಯ’ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ವಿ. ರವಿಚಂದ್ರನ್, ‘ನನ್ನ 31ವರ್ಷಗಳ ಕಲಾ ಸೇವೆಯನ್ನು ಗುರುತಿಸಿ, ಗೌರವ ಡಾಕ್ಟರೇಟ್ ನೀಡಿರುವುದು ಸಂತೋಷವನ್ನುಂಟು ಮಾಡಿದೆ.ನಾನು ಆಕಸ್ಮಿಕವಾಗಿ ಸಿನಿಮಾ ಕ್ಷೇತ್ರಕ್ಕೆ ಬಂದವನು. ತಂದೆಗೆ ಸಿನಿಮಾ ಕ್ಷೇತ್ರದಲ್ಲಿ ನಾನು ಸಾಧನೆ ಮಾಡಬೇಕೆಂಬ ಕನಸಿತ್ತು. ಇದನ್ನು ನನ್ನ ತಂದೆ ವೀರಸ್ವಾಮಿಗೆ ಅರ್ಪಿಸುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.