ಬೆಂಗಳೂರು: ಹಳ್ಳಿಗಳಲ್ಲಿದ್ದುಕೊಂಡು ದನ ಮೇಯಿಸಿಕೊಂಡು ಶಾಲೆಗೆ ಹೋದರೆ ಒಂದು ಹಂತದ ವಿದ್ಯೆ ಸಿಗಬಹುದು. ಆದರೆ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಬೆಳೆಯಲು ಕಷ್ಟ. ಅದಕ್ಕಾಗಿ ನಗರದಲ್ಲಿ ಕಲಿಯಲು ಉತ್ತಮ ವಾತಾವರಣ ಇರುವಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸಿ ಎಂದು ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಸಲಹೆ ನೀಡಿದರು.

ವಿಜಯನಗರ ನಾಯಕ ಸಂಘ ಭಾನುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ, ಪ್ರತಿಭಾ ಪುರಸ್ಕಾರ, ವಧು–ವರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಮಕ್ಕಳಲ್ಲಿ ಬುದ್ಧಿವಂತಿಕೆ ಇದೆ. ಅದಕ್ಕೆ ಸರಿಯಾದ ಅವಕಾಶಗಳು ಸಿಗಬೇಕಿದ್ದರೆ ಸರಿಯಾದ ವಿದ್ಯಾಭ್ಯಾಸವೂ ಇರಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ಕೆ.ಎನ್. ರಾಜಣ್ಣ ಅವರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ವಿಜಯನಗರ ನಾಯಕ ಸಂಘದ ಉಪಾಧ್ಯಕ್ಷ ಎಚ್. ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮಹಾಪೋಷಕ ಕೆ.ಎಸ್. ಮೃತ್ಯುಂಜಯ, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ಜಂಟಿ ನಿರ್ದೇಶಕ ಕೆ.ಆರ್. ರಾಜ್ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಂಗನಾಥಯ್ಯ ಕೆ., ಪದಾಧಿಕಾರಿಗಳು ಭಾಗವಹಿಸಿದ್ದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.