ಬೆಂಗಳೂರು: ‘ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಸದೃಢಗೊಳಿಸಲು ಸರ್ಕಾರ ಬದ್ಧವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಗಮ, ಸುರಕ್ಷಿತ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸ್ ಜಾರಿಗೆ ತಂದಿರುವ ತಂತ್ರಜ್ಞಾನ ಆಧಾರಿತ ಸೌಲಭ್ಯಗಳು ಮತ್ತು ಸಂಚಾರ ಬೀಟ್ ವ್ಯವಸ್ಥೆ, ಸಂಚಾರ ಪೊಲೀಸರ ಕಾರ್ಯನಿರ್ವಹಣಾ ಮಾರ್ಗಸೂಚಿಗಳನ್ನು ಗುರುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

‘ವಾಹನದಟ್ಟಣೆ ಇರುವ ರಸ್ತೆಗಳಲ್ಲಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಆಧುನಿಕ ತಂತ್ರಜ್ಞಾನ
ವನ್ನು ಅಳವಡಿಸಲು ಈಗಾಗಲೇ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜೊತೆಗೆ ಅಪರಾಧ ಕೃತ್ಯಗಳು ನಡೆಯದಂತೆ ನಿಗಾ ವಹಿಸುವ ಜೊತೆಗೆ, ಅಪರಾಧಗಳು ನಡೆದರೆ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಲು ಸಾಧ್ಯವಾಗುವಂತೆ ಕೃತಕ ಬುದ್ದಿಮತ್ತೆಯ ಸಾಧನಗಳನ್ನು ಅಳವಡಿಸಲಾಗುತ್ತದೆ’ ಎಂದರು.

‘ಯಾವ ರಸ್ತೆಯಲ್ಲಿ ಹೆಚ್ಚು ವಾಹನ ದಟ್ಟಣೆ ಇರುತ್ತದೆಯೋ ಆ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಮೊದಲು ಅವಕಾಶ ನೀಡಲು ತಂತ್ರಜ್ಞಾನ ಆಧಾರಿತ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ’ ಎಂದರು.

ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ, ‘ಪೊಲೀಸರ ಶೇ 99ರಷ್ಟು ಒಳ್ಳೆಯ ಕೆಲಸವನ್ನು ನಾವು ಗುರುತಿಸಬೇಕು. ಸರ್ಕಾರ ಮತ್ತು ಸಮಾಜ ಸಂಪೂರ್ಣ ಈ ಸಮುದಾಯಕ್ಕೆ ಗೌರವ ಕೊಡಬೇಕು’ ಎಂದರು.

‘ಪೊಲೀಸ್ ವಸತಿ ಯೋಜನೆ– 2020ಅನ್ನು ಈಗ ಆರಂಭಿಸಿದ್ದೇವೆ. ಪೊಲೀಸರಿಗೆ 10,475 ಮನೆ ಕಟ್ಟಲು ಉದ್ದೇಶಿಸಿದ್ದು, ಮೊದಲ ಹಂತ ಪೂರ್ಣಗೊಂಡಿದೆ. ಎರಡನೇ ಹಂತಕ್ಕೆ ಶೀಘ್ರ ಅನುಮೋದನೆ ನೀಡಲಿದ್ದೇವೆ. ಅಲ್ಲದೆ, ಮುಂದಿನ ವರ್ಷ ಅಂತ್ಯಕ್ಕೆ 16 ಸಾವಿರ ಪೊಲೀಸ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.