ಬೆಂಗಳೂರು: ‘ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕಮಲದ ವಿನ್ಯಾಸದಲ್ಲಿ ನಿರ್ಮಿಸಲಾಗುತ್ತಿದ್ದು, ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಸರಿಯಲ್ಲ. ಈ ವಿನ್ಯಾಸವನ್ನು ಬದಲಿಸಬೇಕು’ ಎಂದುಕೇಂದ್ರ– ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬೃಜೇಶ್ಕಾಳಪ್ಪ ಮತ್ತುಶಾಸಕ ಎನ್.ಎ. ಹ್ಯಾರಿಸ್,‘ಕಮಲ ಯಾವ ಪಕ್ಷದ ಚಿಹ್ನೆ ಎಂದು ಎಲ್ಲರಿಗೂ ಗೊತ್ತಿದೆ’ ಎಂದರು.

‘ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ತೆರಿಗೆದಾರರ ಹಣ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿದೆ. ಹೀಗಾಗಿ, ಕಮಲದ ವಿನ್ಯಾಸದ ನಿರ್ಮಾಣವನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು’ ಎಂದು ಬೃಜೇಶ್ ಆಗ್ರಹಿಸಿದರು.

ಎನ್.ಎ. ಹ್ಯಾರೀಸ್ ಮಾತನಾಡಿ, ‘2005ರ ಕಾಯ್ದೆ ಅನ್ವಯ ವಿಪತ್ತು ನಿರ್ವಹಣಾ ನಿಧಿಯನ್ನು ವಿಪತ್ತು ನಿರ್ವಹಣೆಗೇ ಬಳಸಬೇಕು. ಕೇಂದ್ರ ಸರ್ಕಾರ ಕೋವಿಡ್ನಿಂದ ಮೃತಪಟ್ಟವರಿಗೆ ₹ 4ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಸಮಯದಲ್ಲಿ ಅದನ್ನು ಬಳಸಿಕೊಳ್ಳದಿದ್ದರೆ ಯಾವಾಗ ಬಳಸಿಕೊಳ್ಳಲಾಗುತ್ತದೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.