ರಾಜರಾಜೇಶ್ವರಿನಗರ: ಒಕ್ಕಲಿಗ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ದಲಿತ ಸಮುದಾಯ ದವರನ್ನು ಹೀಯಾಳಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ವಿವಿಧ ವಿಭಾಗಗಳು, ಪಾಲಿಕೆ ಮಾಜಿ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಹಕ್ಕೊತ್ತಾಯ ಮಂಡಿಸಿದರು.

ನಾಗರಬಾವಿಯಲ್ಲಿ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ವಿವಿಧ ವಿಭಾಗಗಳ ಮುಖಂಡರು, ’ಬಿಜೆಪಿ, ಜೆಡಿಎಸ್‌ನ ನಾಯಕರು ಮುನಿರತ್ನ ವಿರುದ್ಧ ಧ್ವನಿ ಎತ್ತುವ ಮೂಲಕ, ಅವರನ್ನು ಪಕ್ಷದಿಂದ ಉಚ್ಛಾಟಿಸಿ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು’ ಎಂದು ಆಗ್ರಹಿಸಿದರು.

ವಿಧಾನಪರಿಷತ್ ಸದಸ್ಯ ಪುಟ್ಟಣ್ಣ, ‘ಬಿಜೆಪಿಗೆ ಮಹಿಳೆಯರು, ದಲಿತರ ಮೇಲೆ ಸ್ವಲ್ಪವಾದರೂ ಗೌರವವಿದ್ದರೆ ಕೂಡಲೇ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಸವಾಲು ಹಾಕಿದರು.

ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್, ‘ಹತ್ತು ವರ್ಷ ಮುನಿರತ್ನ ಜೊತೆಗಿದ್ದೆ. ಆತನ ದುಷ್ಕೃತ್ಯಗಳನ್ನು ನೋಡಿ, ಆತನ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿ, ನೊಂದವರಿಗೆ ನ್ಯಾಯ ಕೊಡಿಸಲು ಮುಂದಾಗಿದ್ದೇನೆ’ ಎಂದರು.

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ‘ಸ್ವಾಭಿಮಾನಿ ಒಕ್ಕಲಿಗರು, ದಲಿತರು ಒಗ್ಗೂಡಿ ಮಂಗಳವಾರ(ಅಕ್ಟೋಬರ್ 1)ದಂದು ಮುನಿರತ್ನ ವಿರುದ್ಧ ನಡೆಸಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು‘ ಎಂದು ಮನವಿ ಮಾಡಿದರು.

ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕ ಬಿ.ಆರ್. ನಂಜುಂಡಪ್ಪ, ಆಶಾ ಸುರೇಶ್, ಮಂಜುಳಾ ನಾರಾಯಣಸ್ವಾಮಿ, ಬಿ.ಆರ್. ಶಿವಮಾದಯ್ಯ, ರೋಹಿಣಿ ಸುರೇಶ್, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಿ. ಹನುಮಂತಯ್ಯ, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್, ಬ್ಲಾಕ್ ಅಧ್ಯಕ್ಷ ರಾಂಪುರ ನಾಗೇಶ್ ಉಪಸಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.