ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ರಾಜ್ಯದಾದ್ಯಂತ ಸೋಮವಾರ (ಜೂನ್ 29) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ‘ಸೈಕಲ್ ಚಳವಳಿ’ ಹಮ್ಮಿಕೊಂಡಿದೆ.

ಪ್ರತಿಭಟನೆ ಅಂಗವಾಗಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳಿಗ್ಗೆ 9.30 ಕ್ಕೆ ತಮ್ಮ ಮನೆಗಳಿಂದ ಕೆಪಿಸಿಸಿ ಕಚೇರಿಗೆ ಸೈಕಲ್ನಲ್ಲಿ ತೆರಳಲು ನಿರ್ಧರಿಸಿದ್ದಾರೆ.

ಬಳಿಕ ಆದಾಯ ತೆರಿಗೆ ಕಚೇರಿ ಎದುರು ನಡೆಯಲಿರುವ ಪ್ರತಿಭಟನೆಯಲ್ಲಿ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಏಕಕಾಲಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಕೊರೊನಾ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿಯೂ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.