ಬೆಂಗಳೂರು: ನಗರದಲ್ಲಿ ಮಳೆ ತಗ್ಗಿದ ಬೆನ್ನಲ್ಲಿಯೇ ತಾಪಮಾನ ದಿನೇ ದಿನೇ ಕುಸಿಯಿತಿದ್ದು, ಇದರಿಂದಾಗಿ ಚಳಿಯೂ ಹೆಚ್ಚಾಗುತ್ತಿದೆ.

ಸಂಜೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇದ್ದರೆ, ಮುಂಜಾನೆ ಅವಧಿಯಲ್ಲಿ ಮಂಜು ಮುಸುಕುತ್ತಿದೆ. ಹೀಗಾಗಿ, ಕೆಲ ದಿನಗಳಿಂದ ನಗರದಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ತಗ್ಗಿದೆ. ಮುಂಜಾನೆ ಹಾಗೂ ಸಂಜೆ ಅವಧಿಯಲ್ಲಿ ನಗರದ ವಿವಿಧೆಡೆ ಚಳಿಯ ವಾತಾವರಣ ಕಾಣಿಸಿಕೊಳ್ಳುತ್ತಿದೆ.

ವಾರದಿಂದ ಗರಿಷ್ಠ ಉಷ್ಣಾಂಶ ಸರಾಸರಿ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಮೋಡ ಕವಿದ ವಾತಾವರಣ ಸಹಿತ ಆಗಾಗ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ತಾಪಮಾನ ಕುಸಿಯುತ್ತಿದೆ. ಕಳೆದೊಂದು ವಾರ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲೂ ಇಳಿಕೆಯಾಗಿದೆ. ರಾತ್ರಿಯಲ್ಲೂ ತಾಪಮಾನ ಮತ್ತಷ್ಟು ಕಡಿಮೆಯಾಗಿ, ಥಂಡಿ ಅನುಭವವಾಗುತ್ತಿದೆ.

ಹವಾಮಾನ ಇಲಾಖೆಯ ಪ್ರಕಾರ ನಗರದಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 24.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಬುಧವಾರ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ನಗರದಲ್ಲಿ ಮುಂದಿನ ಒಂದು ವಾರ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಆಸುಪಾಸು ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.