ಬೆಂಗಳೂರು: ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್(ನೈಸ್) ಕಂಪನಿ ವಿರುದ್ಧ ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ನೈಸ್ ಸಂಸ್ಥೆಗೆ ₹2 ಕೋಟಿ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ನೈಸ್ ಸಂಸ್ಥೆ ಸಲ್ಲಿಸಿದ್ದ ಮೊಕದ್ದಮೆ ವಿಚಾರಣೆ ನಡೆಸಿದ 15ನೇ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲನಗೌಡ ಅವರು, ಈ ಆದೇಶ ಹೊರಡಿಸಿದ್ದಾರೆ.

2011ರ ಜೂನ್ 20ರಂದು ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ನೈಸ್ ಕಂಪನಿ ‘ಸಾರ್ವಜನಿಕ ಹಣ ಲೂಟಿ ಮಾಡುವ ಯೋಜನೆ’ ಎಂದು ಆರೋಪಿಸಿದ್ದರು. ‘ಗೌಡರ ಗರ್ಜನೆ’ ಎಂಬ ಶೀರ್ಷಿಕೆಯಡಿ ಈ ಸಂದರ್ಶನ ಬಿತ್ತರವಾಗಿತ್ತು.

‘ಈ ಹೇಳಿಕೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದೆ. ₹10 ಕೋಟಿ ಪರಿಹಾರ ನೀಡಬೇಕು’ ಎಂದು ಕೋರಿ 2012ರಲ್ಲಿ ನೈಸ್ ಸಂಸ್ಥೆ ಮೊಕದ್ದಮೆ ದಾಖಲಿಸಿತ್ತು. ತಮ್ಮ ಹೇಳಿಕೆ ಸತ್ಯ ಎಂಬುದನ್ನು ದೇವೇಗೌಡರು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.