ಬೆಂಗಳೂರು: ರಾಜ್ಯದಲ್ಲಿ ಭಾನುವಾರ 229 ಕೋವಿಡ್ ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕೆ ಏರಿಕೆಯಾಗಿದೆ.

24 ಗಂಟೆಗಳ ಅವಧಿಯಲ್ಲಿ 3,527 ಪರೀಕ್ಷೆಗಳನ್ನು ನಡೆಸಲಾಗಿದೆ. ಶೇ 6.49ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ 943 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 22 ಮಂದಿ ತೀವ್ರ ನಿಗಾ ಘಟಕ ಹಾಗೂ 35 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 62 ಮಂದಿ ಚೇತರಿಸಿಕೊಂಡಿದ್ದಾರೆ.

22 ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 646 ಪರೀಕ್ಷೆಗಳನ್ನು ನಡೆಸಲಾಗಿದೆ. 42 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 517 ಕ್ಕೆ ಏರಿಕೆಯಾಗಿದೆ. ವಿಜಯಪುರ ಬಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಡಿ.15 ರಿಂದ ಈವರೆಗೆ ರಾಜ್ಯದಲ್ಲಿ 247 ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆ (ಜಿನೋಮಿಕ್ ಸಿಕ್ವೆನ್ಸೀಸ್) ಪರೀಕ್ಷೆಗೆ ಕಳುಹಿಸಲಾಗಿದೆ. ಅವುಗಳಲ್ಲಿ ಈವರೆಗೆ 60 ಮಾದರಿಗಳ ಫಲಿತಾಂಶ ಬಂದಿದೆ. ಇವುಗಳಲ್ಲಿ 34 ಮಾದರಿಗಳಲ್ಲಿ ಜೆಎನ್.1, 18 ಮಾದರಿಗಳಲ್ಲಿ ಎಕ್ಸ್‌ಬಿಬಿ ಹಾಗೂ 8 ಮಾದರಿಗಳಲ್ಲಿ ಕೊರೊನಾ ವೈರಾಣುವಿನ ಇತರ ರೂಪಾಂತರಿ ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.