ಬೆಂಗಳೂರು: ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ನಿವಾರಿಸುವಲ್ಲಿ ವಿಫಲರಾಗಿರುವ ಸರ್ವಾಧಿಕಾರಿ ಮತ್ತು ಫ್ಯಾಸಿಸ್ಟ್ ನರೇಂದ್ರ ಮೋದಿ ಸರ್ಕಾರವನ್ನು ಅಧಿಕಾರದಿಂದ ಇಳಿಸುವುದು ಅನಿವಾರ್ಯವಾಗಿದೆ ಎಂದು ಸಿಪಿಐ ಸಮಾವೇಶದಲ್ಲಿ ಕರೆ ನೀಡಲಾಗಿದೆ.

‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ನಾಯಕರನ್ನು ಒಳಗೊಂಡ ಸಿಪಿಐ ರಾಜಕೀಯ ಸಮಾವೇಶ ಭಾನುವಾರ ನಡೆಯಿತು.

10 ವರ್ಷಗಳಿಂದ ದ್ವೇಷದ ರಾಜಕಾರಣ ನಡೆಸುತ್ತಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ಕಡೆಗಣಿಸಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಆಡಳಿತ ನಡೆಸಿದೆ. ಈ ಆಡಳಿತ ಕೊನೆಗೊಂಡರಷ್ಟೇ ದೇಶದಲ್ಲಿ ಏಕತೆ, ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಿಪಿಐ ನಾಯಕ ಎಂ. ದೀಪಕ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸಿದ್ದನಗೌಡ ಪಾಟೀಲ, ಎಚ್.ವಿ. ಅನಂತ ಸುಬ್ಬರಾವ್, ಕಾಂಗ್ರೆಸ್ ಮುಖಂಡರಾದ ವಿ.ಆರ್. ಸುದರ್ಶನ್, ಯು.ಬಿ. ವೆಂಕಟೇಶ್, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಿಪಿಐ ಪಕ್ಷದ ಕೆ.ಎನ್. ಉಮೇಶ್, ಸಿಪಿಐಎಂಎಲ್ ಮುಖಂಡ ಅಪ್ಪಣ್ಣ ಭಾಗವಹಿಸಿದ್ದರು. ಬಿಜೆಪಿಯನ್ನು ಸೋಲಿಸಬೇಕು ಎಂಬ ಕಿರುಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.