ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್ನನ್ನುಮೂತ್ರಪಿಂಡ ಸಮಸ್ಯೆಯಿಂದಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಗೌರಿ ಅವರ ಕೊಲೆ ಪ್ರಕರಣದಲ್ಲಿ ನವೀನ್ನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿದ್ದ ನವೀನ್ ಅನಾರೋಗ್ಯದಿಂದ ಬಳಲುತ್ತಿದ್ದ. ವೈದ್ಯಕೀಯ ತಪಾಸಣೆ ನಡೆಸಿದಾಗ ಮೂತ್ರಪಿಂಡದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ, ಪೊಲೀಸ್ ಭದ್ರತೆಯಲ್ಲಿ ನವೀನ್ಗೆ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2017ರಲ್ಲಿ ರಾಜರಾಜೇಶ್ವರಿ ನಗರದ ಮನೆಯ ಬಳಿ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳ ತಂಡ ಗುಂಡಿಟ್ಟು ಹತ್ಯೆ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.