ಬೆಂಗಳೂರು: ‘ಅಪರಾಧ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರವನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹೊಂದಿದ್ದಾರೆ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಆತ್ಮಹತ್ಯೆಗೆ ಶರಣಾದ ವಾರ ಪತ್ರಿಕೆಯೊಂದರ ಸಂಪಾದಕ ಹಲ್ಲಗೆರೆ ಶಂಕರ್ ಅವರ ಇಬ್ಬರು ಅಳಿಯಂದಿರಾದ ಇ.ಎಸ್. ಪ್ರವೀಣ್ ಕುಮಾರ್ ಹಾಗೂ ಈಡಿಗ ಶ್ರೀಕಾಂತ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಸಕದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಪ್ರಕರಣದಲ್ಲಿನ ಅರ್ಜಿದಾರ ಆರೋಪಿಗಳು ಹಲ್ಲಗೆರೆ ಶಂಕರ್ ಮತ್ತವರ ಕುಟುಂಬದ ಸದಸ್ಯರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದು ಮರಣ ಪತ್ರದಿಂದ ಸ್ಪಷ್ಟವಾಗಿದೆ. ಮಗು ಸೇರಿದಂತೆ ತಾಯಿ ಹಾಗೂ ಮೂವರು ಮಕ್ಕಳು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಈ ಪ್ರಕರಣವನ್ನು ಸಾಮಾನ್ಯ ಆತ್ಮಹತ್ಯೆ ಎಂದು ಪರಿಗಣಿಸಲಾಗದು. ಸಂತ್ರಸ್ತರು ಮರಣ ಪತ್ರದಲ್ಲಿ ತಮ್ಮ ಸಾವಿಗೆ ನ್ಯಾಯ ಕೋರಿರುವ ವಿಚಾರ ಸಾರ್ವಜನಿಕರ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರಿಗೆ ಜಾಮೀನು ನೀಡಲಾಗದು’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.