ಬೆಂಗಳೂರು: ‘ದೇಶದಲ್ಲಿ ಪ್ರತಿ 40 ಸೆಕೆಂಡ್‌ಗೆ ಒಬ್ಬರು ಪಾರ್ಶ್ವವಾಯು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ವಾರ್ಷಿಕ ಸುಮಾರು 1.85 ಲಕ್ಷ ಪಾರ್ಶ್ವವಾಯು ಪ್ರಕರಣಗಳು ವರದಿಯಾಗುತ್ತಿವೆ’ ಎಂದು ಫೋರ್ಟಿಸ್ ಆಸ್ಪತ್ರೆಯ ನರವಿಜ್ಞಾನ ವಿಭಾಗದ ನಿರ್ದೇಶಕ ಡಾ. ಗುರುಪ್ರಸಾದ್ ಹೊಸೂರಕರ್ ಕಳವಳ ವ್ಯಕ್ತಪಡಿಸಿದರು.

ಪಾರ್ಶ್ವವಾಯು ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಲು ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆ ನಗರದಲ್ಲಿ ಭಾನುವಾರ ಹಮ್ಮಿಕೊಂಡ ಸೈಕ್ಲೋಥಾನ್‌ನಲ್ಲಿ ಭಾಗವಹಿಸಿ, ಮಾತನಾಡಿದರು.

‘ಜೀವಕ್ಕೆ ಅಪಾಯವನ್ನು ತಂದೊಡ್ಡುವ ಪಾರ್ಶ್ವವಾಯು ಸಮಸ್ಯೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ಇರಬೇಕು. ಈ ಸಮಸ್ಯೆಯು ಅಧಿಕ ರಕ್ತದೊತ್ತಡದಂತಹ ಸಮಸ್ಯೆ ಇರುವವರಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸುವುದು, ಆರೋಗ್ಯಕರ ಆಹಾರ ಸೇವನೆ, ನಿಯಮಿತ ದೈಹಿಕ ಚಟುವಟಿಕೆ, ಒತ್ತಡ ನಿರ್ವಹಣೆ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳಿಂದ ಪಾರ್ಶ್ವವಾಯು ಸಮಸ್ಯೆ ತಡೆಯಬಹುದು’ ಎಂದು ಹೇಳಿದರು.

ಹೃದಯ ಶಸ್ತ್ರಚಿಕಿತ್ಸಕ ಡಾ. ವಿವೇಕ್ ಜವಳಿ, ‘ಹೃದಯಾಘಾತದಂತೆ ಪಾರ್ಶ್ವವಾಯು ಸಮಸ್ಯೆಗೂ ತುರ್ತಾಗಿ ಚಿಕಿತ್ಸೆ ಒದಗಿಸಬೇಕು. ನಿಗದಿತ ಅವಧಿಯಲ್ಲಿ ಚಿಕಿತ್ಸೆ ನೀಡದಿದ್ದರೆ ಅಂಗವಿಕಲರಾಗುವ ಸಾಧ್ಯತೆ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಪಾರ್ಶ್ವವಾಯು ಸಾಮಾನ್ಯವಾಗಿದ್ದು, ಜನರಿಗೆ ಈ ಸಮಸ್ಯೆ ಬಗ್ಗೆ ಅರಿವು ಮೂಡಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.