ಬೆಂಗಳೂರು: ‘ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ’ ಎಂದು ಆರೋಪಿಸಿ, ಸಂತ್ರಸ್ತೆ ಮಡಿವಾಳ ಠಾಣೆಗೆ ದೂರು ನೀಡಿದ್ದಾರೆ.

ಯುವಕನ ವಿರುದ್ಧ 24 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

‘ಡೇಟಿಂಗ್ ಆ್ಯಪ್ನಲ್ಲಿ ಯುವಕ–ಯುವತಿ ಮಧ್ಯೆ ಪರಿಚಯವಾಗಿತ್ತು. ಕೆಲವು ದಿನಗಳ ಬಳಿಕ ಇಬ್ಬರು ಮೊಬೈಲ್ ಸಂಖ್ಯೆಯನ್ನು ಪರಸ್ಪರ ಬದಲಾವಣೆ ಮಾಡಿಕೊಂಡಿದ್ದರು. ಇಬ್ಬರೂ ವಾಟ್ಸ್ಆ್ಯಪ್ನಲ್ಲಿ ಚಾಟಿಂಗ್ ನಡೆಸುತ್ತಿದ್ದರು. ಇಬ್ಬರ ಮಧ್ಯೆ ಆತ್ಮೀಯತೆ ಬೆಳೆದು ಪ್ರೀತಿಸುತ್ತಿದ್ದರು. ಕೆಲವು ಸ್ಥಳಗಳಲ್ಲಿ ಸುತ್ತಾಟ ಸಹ ನಡೆಸಿದ್ದರು’ ಎಂದು ಮೂಲಗಳು ತಿಳಿಸಿವೆ.

‘ಪಾರ್ಟಿ ನೆಪದಲ್ಲಿ ಹೋಟೆಲ್ವೊಂದಕ್ಕೆ ಕರೆದೊಯ್ದು ಜ್ಯೂಸ್ನಲ್ಲಿ ಮದ್ಯ ಬೆರೆಸಿ, ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ನನ್ನ ಮೇಲೆ ಯುವಕ ಅತ್ಯಾಚಾರ ಎಸಗಿದ್ದಾನೆ. ಮದುವೆ ಆಗುತ್ತೇನೆ ಎಂದು ನಂಬಿಸಿ ಗರ್ಭಪಾತ ಮಾಡಿಸಿದ್ದ. ಈಗ ಮದುವೆ ಆಗದೇ ಮೋಸ ಮಾಡಿದ್ದಾನೆ’ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.

‘ಸಂತ್ರಸ್ತೆ ಹಾಗೂ ಯುವಕನಿಂದ ಮಾಹಿತಿ ಪಡೆಯಲಾಗಿದೆ. ಸಂತ್ರಸ್ತೆ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.