ಬೆಂಗಳೂರು: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಒಂದು ಸಾವಿರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ಶಿಕ್ಷಣ ನೀಡಲು ಜೈನ್ ವಿಶ್ವವಿದ್ಯಾಲಯ ಮುಂದೆ ಬಂದಿದ್ದು, ಈ ಕುರಿತ ಒಪ್ಪಿಗೆ ಪತ್ರವನ್ನು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ನೀಡಿತು.

ಜೈನ್ ಸಂಸ್ಥೆಯ 30ನೇ ವಾರ್ಷಿಕೋತ್ಸವದ ಅಂಗವಾಗಿ ಶೇಷಾದ್ರಿಪುರದ ಕಾಲೇಜು ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಚೆನ್‌ರಾಜ್ ರಾಯ್‌ಚಂದ್ ಅವರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ಹಸ್ತಾಂತರಿಸಿದರು.

‘ಈ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ಅತ್ಯುತ್ತಮ ಶಿಕ್ಷಣ ನೀಡಲಾಗುವುದು. ಅವರಿಗೆ ಅಗತ್ಯವಾದ ಎಲ್ಲ ಶೈಕ್ಷಣಿಕ ಅಗತ್ಯಗಳನ್ನೂ, ಪರಿಕರಗಳನ್ನೂ ಒದಗಿಸಲಾಗುವುದು ಎಂದು ಜೈನ್ ಸಂಸ್ಥೆ ತಿಳಿಸಿದೆ. ಇಂಥ ವಿದ್ಯಾರ್ಥಿಗಳಿಗೆ ಶೇ 100 ವಿದ್ಯಾರ್ಥಿ ವೇತನವನ್ನೂ ಸಂಸ್ಥೆ ಘೋಷಣೆ ಮಾಡಿದೆ’ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಪಾರಂಪರಿಕ ಕಾಲೇಜು ಕಟ್ಟಡಗಳ ಅಭಿವೃದ್ಧಿ: ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿರುವ ಸರ್ಕಾರಿ ಶಾಲೆಯ ಪಾರಂಪರಿಕ ಕಲ್ಲು ಕಟ್ಟಡ ಹಾಗೂ ರೆಸ್‌ಕೋರ್ಸ್ ರಸ್ತೆಯಲ್ಲಿ ಪಾರಂಪರಿಕ ಆರ್.ಸಿ.ಕಾಲೇಜಿನ ಕಲ್ಲು ಕಟ್ಟಡಗಳನ್ನು ಸಂರಕ್ಷಿಸಿ ನವೀಕರಣ ಮಾಡುವುದಕ್ಕೂ ಜೈನ್ ಶಿಕ್ಷಣ ಸಂಸ್ಥೆ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.