ಬೆಂಗಳೂರು:ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಈ ಪರಿಸ್ಥಿತಿಯನ್ನುಅಧಿಕಾರಿಗಳು ಸಮರ್ಪಕವಾಗಿ ನಿಭಾಯಿಸುವಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಮಂಗಳವಾರ ಕರೆದಿದ್ದಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಅಂಬರೀಷ್ ಮತ್ತು ಜಾಫರ್ ಷರೀಫ್ ಅವರಿಗೆ ಮೌನಾಚರಣೆ ಸಲ್ಲಿಸಿ ನಂತರ ಅವರು ಮಾತನಾಡಿದರು.

‘ಕೊಡಗು ನೆರೆ ಸ್ಥಿತಿಯಿಂದ ಒಟ್ಟು ₹4 ಸಾವಿರ ಕೋಟಿ ನಷ್ಟ ಉಂಟಾಗಿದೆ. ಇದರಲ್ಲಿ ₹546 ಕೋಟಿ ಮಾತ್ರ ಕೇಂದ್ರ ಸರ್ಕಾರ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ 100 ತಾಲ್ಲೂಕುನ್ನುಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ಕೆಲ ತಾಲ್ಲೂಕುಗಳೂ ಈ ಪಟ್ಟಿಗೆ ಸೇರಲಿವೆ. ಹೀಗಾಗಿ ಜಿಲ್ಲಾಧಿಕಾರಿಗಳು ಇದನ್ನು ಸಮರ್ಪಕವಾಗಿ ನಿಭಾಯಿಸಿ’ ಎಂದು ಸಲಹೆ ನೀಡಿದರು.

‘ಜನಸಾಮಾನ್ಯರು ವಿಧಾನಸೌಧಕ್ಕೇ ಬರುವುದನ್ನು ತಪ್ಪಿಸಿ, ಜಿಲ್ಲಾಧಿಕಾರಿಗಳೇಅವರ ಸಮಸ್ಯೆಯನ್ನು ಆಲಿಸಬೇಕು. ಜೊತೆಗೆ ಪ್ರತಿ ತಿಂಗಳು ಗ್ರಾಮ ವಾಸ್ತವ್ಯ ಹೂಡುಬೇಕು’ ಎಂದು ಸೂಚಿಸಿದರು.

ಬೆಳಗಾವಿ ಅಧಿವೇಶನ ನಡೆಯುವಾಗ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ. ಏಳೆಂಟು ವರ್ಷಗಳಿಂದ ಈ ಪ್ರವೃತ್ತಿ ಇದೆ. ಸುವರ್ಣ ವಿಧಾನಸೌಧ ಕಟ್ಟಿರುವುದೇ ಪ್ರತಿಭಟನೆ ನಡೆಸಲು ಎಂಬಂತೆ ಆಗಿದೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ ಹೇಳಿದರು.

‘ಬರದಿಂದ ಜನರ ಗುಳೆ ತಪ್ಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಿಸಿ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಯಮಿತವಾಗಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕು. ಎಲ್ಲ ಕೆಲಸಗಳನ್ನು ನಾನೇ ಮೇಲ್ವಿಚಾರಣೆ ಮಾಡಬೇಕಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ನೋಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ

ಸಂವಿಧಾನ ಸಭೆಯ ದಿನದ ಅಂಗವಾಗಿ ಕುಮಾರಸ್ವಾಮಿ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ಪ್ರಸ್ತಾವನೆಯನ್ನು ಬೋಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.