ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಭೂ ಮಂಜೂರಾತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಅರ್ಹ ಮತ್ತು ಅನರ್ಹ ಅರ್ಜಿದಾರರನ್ನು ವಿಂಗಡಿಸಿ ನವೆಂಬರ್ 25ರೊಳಗೆ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲ ತಹಶೀಲ್ದಾರ್ಗಳಿಗೆ ಗಡುವು ನೀಡಿದ್ದಾರೆ.

ಗುರುವಾರ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ರಾಜ್ಯದ ಎಲ್ಲ ತಹಶೀಲ್ದಾರ್ಗಳ ಜತೆ ಸಭೆ ನಡೆಸಿದ ಅವರು, ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಪ್ರಗತಿ ಪರಿಶೀಲಿಸಿದರು. ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಅರ್ಜಿ ವಿಲೇವಾರಿಯಲ್ಲಿ ಪ್ರಗತಿ ಇಲ್ಲದಿರುವುದನ್ನು ಗಮನಿಸಿದ ಅವರು, ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

‘ಬಗರ್ ಹುಕುಂ ಯೋಜನೆ ಬಡವರಿಗಾಗಿ ಇರುವುದು. ಬಡವರ ಕೆಲಸದ ವಿಚಾರದಲ್ಲಿ ಅಧಿಕಾರಿ ವರ್ಗದಿಂದ ಈ ಮಟ್ಟದ ಅಸಡ್ಡೆಯನ್ನು ನಿರೀಕ್ಷಿಸಿರಲಿಲ್ಲ. ರಾಜ್ಯದ 14 ಲಕ್ಷ ರೈತರು ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳ ಪೈಕಿ ಅರ್ಹ, ಅನರ್ಹ ಅರ್ಜಿದಾರರನ್ನು ಗುರುತಿಸಲು ಒಂದೂವರೆ ವರ್ಷ ಬೇಕೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

‘ಒಂದು ವರ್ಷದಿಂದ ನಿರಂತರಾಗಿ ಜಿಲ್ಲೆಗಳಲ್ಲಿ ಭೇಟಿ ನೀಡಿ ಬಗರ್ ಹುಕುಂ ಅರ್ಜಿ ವಿಲೇವಾರಿ ಪರಿಶೀಲಿಸಿದ್ದೇನೆ. ಪ್ರತಿ ತಿಂಗಳು ವಿಡಿಯೊ ಕಾನ್ಫರೆನ್ಸಿಂಗ್ ನಡೆಸುತ್ತಿದ್ದೇನೆ. ಆದರೂ, ಕೆಲವು ತಹಶೀಲ್ದಾರರು ಅಸಡ್ಡೆ ತೋರುತ್ತಿದ್ದಾರೆ. ಇದನ್ನು ಸಹಿಸುವುದಿಲ್ಲ. ನ. 25ರೊಳಗೆ ಪಟ್ಟಿ ಅಂತಿಮಗೊಳ್ಳಬೇಕು. ನ. 26ರಂದು ಎಲ್ಲ ಜಿಲ್ಲಾಧಿಕಾರಿಗಳೂ ನನಗೆ ಪಟ್ಟಿ ಸಲ್ಲಿಸಬೇಕು’ ಎಂದರು.

ಸಭೆಯಲ್ಲೇ ನೊಟೀಸ್: ಬಗರ್ ಹುಕುಂ ಅರ್ಜಿ ವಿಲೇವಾರಿಯಲ್ಲಿ ಅಸಡ್ಡೆ ತೋರಿರುವ ಮಾಲೂರು ತಾಲ್ಲೂಕು ತಹಶೀಲ್ದಾರ್ ರಮೇಶ್ ಅವರಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸಚಿವರು ಸಭೆಯಲ್ಲೇ ಸೂಚಿಸಿದರು.

ಮಾಲೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 10,771 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈವರೆಗೆ ಸ್ಥಳ ಪರಿಶೀಲನೆಗೊಂಡಿರುವ ಅರ್ಜಿಗಳ ಸಂಖ್ಯೆ ಕೇವಲ 55 ಮಾತ್ರ. ಸಭೆಯ ಆರಂಭದಲ್ಲೇ ರಮೇಶ್ ಅವರ ಜತೆ ಮಾತನಾಡಲು ಸಚಿವರು ಯತ್ನಿಸಿದರು. ಆದರೆ, ಅವರು ಸಭೆಗೆ ಒಂದು ಗಂಟೆ ತಡವಾಗಿ ಹಾಜರಾದರು. ಸಚಿವರ ಪ್ರಶ್ನೆಗಳಿಗೂ ಸರಿಯಾಗಿ ಉತ್ತರಿಸಲಿಲ್ಲ. ರಮೇಶ್ ಅವರಿಗೆ ತಕ್ಷಣ ಶೋಕಾಸ್ ನೊಟೀಸ್ ಜಾರಿಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

‘ನಾಚಿಕೆ ಇಲ್ಲವೆ?: ಬಗರ್ ಹುಕುಂ ಅರ್ಜಿ ವಿಲೇವಾರಿ ಸೇರಿದಂತೆ ಕಂದಾಯ ಇಲಾಖೆಯ ಬಹುತೇಕ ಕೆಲಸಗಳಲ್ಲಿ ಮೈಸೂರು ಜಿಲ್ಲೆ ಹಿಂದುಳಿದಿರುವುದನ್ನು ಗಮನಿಸಿದ ಕೃಷ್ಣ ಬೈರೇಗೌಡ, ‘ಮೈಸೂರು ಕಳಪೆ ಜಿಲ್ಲೆಯಾಗುತ್ತಿದೆ. ಅಧಿಕಾರಿಗಳೇ ನಿಮಗೆ ನಾಚಿಕೆ ಆಗುವುದಿಲ್ಲವೆ’ ಎಂದು ತರಾಟೆಗೆ ತೆಗೆದುಕೊಂಡರು.

ಉತ್ತಮ ಕೆಲಸ ಮಾಡಿದರೆ ಸನ್ಮಾನ

ಶೇಕಡ 80ರಷ್ಟು ಬಗರ್ ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ತಹಶೀಲ್ದಾರ್ ಶ್ರೀಧರ್ ಶೇಖರ್ ಮತ್ತು ಮುಂಡಗೋಡು ತಾಲ್ಲೂಕು ತಹಶೀಲ್ದಾರ್ ಶಂಕರ್ ಗೌಡಿ ಅವರನ್ನು ಕಂದಾಯ ಸಚಿವರು ಸಭೆಯಲ್ಲಿ ಪ್ರಶಂಸಿಸಿದರು.

‘ಕೆಲಸ ಮಾಡಿ ಎಂದರೆ ಬಗರ್ ಹುಕುಂ ಆ್ಯಪ್ ಸಹಕರಿಸುತ್ತಿಲ್ಲ ನೆಟ್ವರ್ಕ್ ಇಲ್ಲ ಎಂದು ಸಲ್ಲದ ಕಾರಣ ನೀಡುವವರೇ ಹೆಚ್ಚು. ಆದರೆ ನೆಟ್ವರ್ಕ್ ಇಲ್ಲದೇ ಇದ್ದರೂ ಗುಡ್ಡಗಾಡು ಪ್ರದೇಶದ ಈ ಅಧಿಕಾರಿಗಳು ಹೇಗೆ ಶೇ.80ರಷ್ಟು ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಸಾಧ್ಯವಾಯಿತು? ಈ ರೀತಿ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡುವವರನ್ನು ಮುಂದಿನ ತಿಂಗಳಲ್ಲಿ ಬೆಂಗಳೂರಿಗೆ ಆಹ್ವಾನಿಸಿ ಸನ್ಮಾನಿಸುತ್ತೇನೆ’ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.