ಬೆಂಗಳೂರು: ರೈತ ಮಹಿಳೆಯನ್ನು ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಒತ್ತಾಯಿಸಿದ್ದಾರೆ.

ಇಲ್ಲವಾದರೆ ಶುಕ್ರವಾರ ಬೆಳಿಗ್ಗೆ ರಾಜ್ಯ ಪೊಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಕಚೇರಿ ಮುಂದೆ ಸತ್ಯಾಗ್ರಹ ನಡೆಸಲಾಗುವುದು. ಮಾಧುಸ್ವಾಮಿ ರೈತ ಮಹಿಳೆ ಬಳಿ ಕ್ಷಮೆ ಯಾಚಿಸಬೇಕು ಎಂದು ಮೀಗಾ ಹೇಳಿದ್ದಾರೆ.

ಶರವಣ ಆಕ್ರೋಶ:ಅಹವಾಲು ಸಲ್ಲಿಸಲು ಬಂದ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರ ವರ್ತನೆ ಅಕ್ಷಮ್ಯ. ಮಹಿಳೆ ಬಳಿ ಸಚಿವರು ಕ್ಷಮೆ ಯಾಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಆಗ್ರಹಿಸಿದ್ದಾರೆ.

ರೈತ ನಮ್ಮ ದೇಶದ ಬೆನ್ನೆಲುಬು ಎಂದರೆ ಮಾತ್ರ ಸಾಲದು, ಅವರಿಗೆ ಸಲ್ಲಬೇಕಾದ ಗೌರವವನ್ನು ನಾವು ಸಲ್ಲಿಸಲೇಬೇಕು ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.