ಬೆಂಗಳೂರು: ಎಲ್ಲ ಜಾತಿ ಮತ್ತು ಸಮುದಾಯಗಳ ಜನರಿಗೂ ಮದ್ಯ ದಂಗಡಿಗಳನ್ನು ನಡೆಸಲು ಅವಕಾಶವಾಗುವಂತೆ ಮದ್ಯದಂಗಡಿಗಳ ಪರವಾನಗಿಯನ್ನು ಹರಾಜಿನ ಮೂಲಕ ಹಂಚಿಕೆ ಮಾಡಬೇಕು ಎಂದು ಭೀಮ್ ಆರ್ಮಿ ಆಗ್ರಹಿಸಿದೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ರಾಜ್ಗೋಪಾಲ್ ಡಿ., ‘25 ವರ್ಷಗಳಿಂದ ರಾಜ್ಯದಲ್ಲಿ ಮದ್ಯದಂಗಡಿಗಳ ಪರವಾನಗಿಗಳ ಹರಾಜು ನಡೆಸಿಲ್ಲ. ರಾಜಕಾರಣಿಗಳು, ಅಧಿಕಾರಿಗಳು ಮತ್ತು ಬಂಡವಾಳಶಾಹಿಗಳು ಸೇರಿಕೊಂಡು ತಮಗೆ ಬೇಕಾದವರಿಗೆ ಪರವಾನಗಿ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ಕಾನೂನು, ನಿಯಮಗಳನ್ನು ತಮಗೆ ಬೇಕಾದಂತೆ ಬದಲಾವಣೆ ಮಾಡಿ ಕೊಂಡು ಮದ್ಯದಂಗಡಿ ತೆರೆಯಲು ಪರವಾನಗಿ ಮಂಜೂರಾತಿಯಲ್ಲಿ ಅಕ್ರಮ ನಡೆಸಲಾಗುತ್ತಿದೆ. ಕೆಲವೇ ವ್ಯಕ್ತಿಗಳ ಕುಟುಂಬದವರು ಹೆಚ್ಚು ಪರವಾನಗಿಗಳನ್ನು ಪಡೆಯುತ್ತಿದ್ದಾರೆ. ಪ್ರತಿ ಹತ್ತು ವರ್ಷಕ್ಕೊಮ್ಮೆ ಹರಾಜು ನಡೆಸುವ
ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿ ಸಬೇಕು ಎಂದು ಆಗ್ರಹಿಸಿದರು.

ಭೀಮ್ ಆರ್ಮಿಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಸಾಮ್ರಾಟ್, ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಸಾಬ್, ಬಸವನಗುಡಿ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಮಹಾದೇವ
ಪ್ರಸಾದ್ ಕೆ. ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.