ಬೆಂಗಳೂರು: ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರ ವೇತನ ಪೌರ ಕಾರ್ಮಿಕರ ಸೇವೆಯನ್ನು ಸೆಪ್ಟೆಂಬರ್ ತಿಂಗಳೊಳಗೆ ಕಾಯಂಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾಸಂಘ ಆಗ್ರಹಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ, ‘ರಾಜ್ಯದಲ್ಲಿರುವ 24,500 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಆದರೆ, ಇದುವರೆಗೆ ಕಾಯಂಗೊಳಿಸಿರುವ ಸಿಬ್ಬಂದಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

‘ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಲ್ಲಿ ಇನ್ನೂ ಗುತ್ತಿಗೆ ಪದ್ಧತಿಯಲ್ಲಿ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೂಡಲೇ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಅವರ ಸೇವೆಯನ್ನು ಕಾಯಂಗೊಳಿಸಬೇಕು. ರಾಜ್ಯದಾದ್ಯಂತ ಕಸ ವಿಲೇವಾರಿ ಮಾಡುವ ಲಾರಿ ಮತ್ತು ಆಟೊ ಚಾಲಕರು, ಸಹಾಯಕರು, ಸ್ವಚ್ಛಾತಾಗಾರರನ್ನು ಗುತ್ತಿಗೆ ಪದ್ಧತಿಯಿಂದ ಮುಕ್ತಿಗೊಳಿಸಿ, ನೇರ ವೇತನ ಪಾವತಿ ಅಡಿಯಲ್ಲಿ ನೇಮಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ನಿವೃತ್ತರಾದ ಪೌರ ಕಾರ್ಮಿಕರಿಗೆ ನಿವೃತ್ತಿ ವೇತನ ನೀಡುವ ಆದೇಶವಾಗಿದ್ದರೂ, ಇದುವರೆಗೂ ಜಾರಿಗೊಂಡಿಲ್ಲ. ಕೂಡಲೇ ನಿವೃತ್ತಿ ವೇತನ ನೀಡುವ ವ್ಯವಸ್ಥೆ ಮಾಡಬೇಕು. ಬಿಬಿಎಂಪಿಯಲ್ಲಿ ಗುತ್ತಿಗೆ ಪದ್ಧತಿ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಕಿರಿಯ ಆರೋಗ್ಯ ಪರಿವೀಕ್ಷಕರನ್ನು ನೇರ ವೇತನ ಪಾವತಿ ಅಡಿಯಲ್ಲಿ ನೇಮಿಸಿಕೊಳ್ಳಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.