ಬೆಂಗಳೂರು: ‘ಡೆಂಗಿ ದೃಢಪಟ್ಟ ಪ್ರತಿಯೊಬ್ಬರ ಮೇಲೂ 14 ದಿನಗಳವರೆಗೆ ನಿಗಾ ವಹಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಶುಕ್ರವಾರ ನಡೆದ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಲ್ಲಿ ಡೆಂಗಿ ಬಗ್ಗೆ ಜಾಗೃತಿ ಮೂಡಿಸಿದರು. ಇದೇ ವೇಳೆ ಡೆಂಗಿ ‘ಹಾಟ್ ಸ್ಪಾಟ್’ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡೆಂಗಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಡೆಂಗಿ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗಿ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ, ಡೆಂಗಿ ಹತೋಟಿಗೆ ತರುವಂತೆ ಸೂಚಿಸಿದ್ದೇನೆ’ ಎಂದರು.

‘10 ಜಿಲ್ಲೆಗಳ ಡೆಂಗಿ ಹಾಟ್ ಸ್ಪಾಟ್ಗಳಿಗೆ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಈ ಅಧಿಕಾರಿಗಳು ಹಾಟ್ ಸ್ಪಾಟ್ಗಳಿಗೆ ಭೇಟಿ ನೀಡಿ, ಡೆಂಗಿ ನಿಯಂತ್ರಣ ಕ್ರಮಗಳ ಅನುಷ್ಠಾನದ ಬಗ್ಗೆ ವಿಶೇಷ ಗಮನಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಗಿ ದೃಢ ಪ್ರಕರಣಗಳು ವರದಿಯಾದರೆ ಡೆಂಗಿ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಜ್ವರ ಚಿಕಿತ್ಸಾಲಯಗಳನ್ನ ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ’ ಎಂದು ಹೇಳಿದರು.

‘ನಿಫಾ ಪ್ರಕರಣ ಪತ್ತೆಯಾಗಿಲ್ಲ’

‘ಕೇರಳದಲ್ಲಿ ನಿಫಾ ವೈರಾಣು ಪತ್ತೆಯಾಗಿರುವುದರಿಂದ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಈವರೆಗೆ ನಿಫಾ ಪ್ರಕರಣ ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರ ವಹಿಸಬೇಕು. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಬೇಕು. ನಿಫಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಇಲಾಖೆ ಕೂಡ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಿದೆ’ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.