ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಅವರ ಸಾವಿಗೆ ನಿಖರ ಕಾರಣ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

‘ಗುರುಪ್ರಸಾದ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅವರ ಎರಡನೇ ಪತ್ನಿ ಸುಮಿತ್ರಾ ದೂರು ನೀಡಿದ್ಧಾರೆ. ಅದನ್ನು ಆಧರಿಸಿ ಅಸಹಜ ಸಾವು ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಠಾಣೆ ಪೊಲೀಸರು, ಪ್ರಕರಣದ ಸಂಬಂಧ ಸೋಮವಾರ ಕೆಲ ಮಾಹಿತಿ ಕಲೆ ಹಾಕಿದರು.

‘ಗುರುಪ್ರಸಾದ್ ಅವರು ಎಷ್ಟು ಸಾಲ ಮಾಡಿಕೊಂಡಿದ್ದರು ಎಂಬುದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಪಟ್ಟಿ ಸಿದ್ಧಪಡಿಸಿ ಸಾಲ ನೀಡಿದವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಸಾಲ ಮರು ಪಾವತಿಸುವಂತೆ ಏನಾದರೂ ಕಿರುಕುಳ ಕೊಡಲಾಗಿತ್ತೇ ಎಂಬುದರ ಬಗ್ಗೆಯೂ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.

‘ಗುರುಪ್ರಸಾದ್ ಅವರ ಮೃತದೇಹ ದೊರೆತ ಫ್ಲ್ಯಾಟ್ ಅನ್ನು ಪರಿಶೀಲಿಸಲಾಗಿದೆ. ಯಾವುದೇ ಮರಣಪತ್ರ ದೊರೆತಿಲ್ಲ. ಫ್ಲ್ಯಾಟ್ನಲ್ಲಿದ್ದ ಮೂರು ಮೊಬೈಲ್ಗಳು, ಎರಡು ಟ್ಯಾಬ್ಗಳು ಹಾಗೂ ಒಂದು ಲ್ಯಾಪ್ಟಾಪ್ ಜಪ್ತಿ ಮಾಡಿಕೊಳ್ಳಲಾಗಿದೆ. ಇವುಗಳಲ್ಲಿ ಚಾರ್ಜ್ ಇರಲಿಲ್ಲ. ಚಾರ್ಜ್ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಹೆಚ್ಚಿನ ಮಾಹಿತಿ ಕಲೆಹಾಕಲು ಜಪ್ತಿ ಮಾಡಿಕೊಂಡಿರುವ ಎಲೆಕ್ಟ್ರಾನಿಕ್ ಉಪಕರಣಗಳನ್ನೂ ಎಫ್ಎಸ್ಎಲ್ಗೆ ರವಾನೆ ಮಾಡಲಾಗುವುದು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.