ರಾಜರಾಜೇಶ್ವರಿನಗರ: ‘ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತ್ತು ಅವರ ಮಕ್ಕಳಿಗೆ ಸರ್ಕಾರ ವಿವಿಧ ಸವಲತ್ತು, ಸಾಲ ಸೌಲಭ್ಯ, ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು.

ಮಾಗಡಿ ರಸ್ತೆಯ ಬಿಇಎಲ್ ಬಡಾವಣೆಯ ಶಾಸಕರ ಕಚೇರಿಯಲ್ಲಿ ಕಟ್ಟಡ ಕಾರ್ಮಿಕರ 60 ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.

‘ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು. ಸರ್ಕಾರದ ಸವಲತ್ತು ನಿಜವಾದ ಜನರಿಗೆ ಸಿಗಬೇಕು. ಅಂತಹವರನ್ನು ಗುರುತಿಸಿ ಸೌಲಭ್ಯ ವಿತರಿಸಿ’ ಎಂದು ಅಧಿಕಾರಿಗಳಿಗೆ ಹೇಳಿದರು.

ಕಾರ್ಮಿಕ ಅಧಿಕಾರಿ ಸುಜಾತ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಅನುಪಮ, ಸುಧೀಂದ್ರ, ಯುವ ಮುಖಂಡ ಮಹೇಂದ್ರ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.