ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್, ಕನಕಪುರ ಪಟ್ಟಣದಲ್ಲಿ ಹಾದುಹೋಗಿರುವ ಅರ್ಕಾವತಿ ನದಿಗೆ ಅಡ್ಡಲಾಗಿ ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಿದರು.

ದಿಂಡಿಗಲ್–ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಕನಕಪುರ ಪಟ್ಟಣದಲ್ಲೇ ಅರ್ಕಾವತಿ ನದಿ ಹರಿಯುತ್ತದೆ. 1954ರಲ್ಲಿ ನಿರ್ಮಿಸಿರುವ
ಸೇತುವೆ ಅತ್ಯಂತ ಕಿರಿದಾಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ. ₹ 62.10 ಕೋಟಿ ವೆಚ್ಚದಲ್ಲಿ ಪರ್ಯಾಯ ಸೇತುವೆ ನಿರ್ಮಿಸುವ ಪ್ರಸ್ತಾವ
ವಿದೆ. ಅದಕ್ಕೆ ತ್ವರಿತವಾಗಿ ಮಂಜೂರಾತಿ ನೀಡಿ, ಕಾಮಗಾರಿ ಆರಂಭಿಸಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಹೆದ್ದಾರಿ 209ರ ಸುಧಾರಣೆಗೂ ಕ್ರಮ ಕೈಗೊಳ್ಳಬೇಕು. ಬೆಂಗಳೂರು–ಮೈಸೂರು ನಡುವಿನ ದಶಪಥ ಹೆದ್ದಾರಿಯಲ್ಲಿ ಇರುವ ದೋಷಗಳನ್ನು ಸರಿಪಡಿಸಬೇಕು. ಅತಿವೃಷ್ಟಿಯಿಂದ ಈ ಮಾರ್ಗದ ರಾಮನಗರ, ಚನ್ನಪಟ್ಟಣ ಮತ್ತು ಮಂಡ್ಯ ಭಾಗದಲ್ಲಿ ಜನರಿಗೆ ಉಂಟಾದ ಸಂಕಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.