ಬೆಂಗಳೂರು: ಯಾವುದೇ ಅನುಮತಿ ಪಡೆಯದೇ ಕಬ್ಬನ್ ಉದ್ಯಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಹೊರಟಿರುವ ಸಂಸ್ಥೆಯೊಂದು ಜನರಿಂದ ಶುಲ್ಕ ಸಂಗ್ರಹಿಸುತ್ತಿದೆ. ಹಣ ನೀಡಿ ಯಾರೂ ಮೋಸ ಹೋಗಬಾರದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

‘ಟ್ರೋವ್ ಎಕ್ಸ್ಪೀರಿಯನ್ಸ್’ ಹೆಸರಿನ ಸಂಸ್ಥೆಯೊಂದು ‘ಫಾರೆಸ್ಟ್ ಬಾತಿಂಗ್ ಎಕ್ಸ್ಪೀರಿಯನ್ಸ್‘ ಎಂಬ ಕಾರ್ಯಕ್ರಮವನ್ನು ಏ.28ರಂದು ಆಯೋಜಿಸುವುದಾಗಿ ಆ ಸಂಸ್ಥೆಯ ವೆಬ್ಸೈಟ್ನಲ್ಲಿ ಹೇಳಿಕೊಂಡಿದೆ. ಇದಕ್ಕಾಗಿ ಜನರಿಂದ ₹ 1500 ಶುಲ್ಕ ನಿಗದಿಪಡಿಸಿದೆ. ಆದರೆ, ಈ ಕಾರ್ಯಕ್ರಮ ನಡೆಸಲು ಇಲಾಖೆಯಿಂದ ಅನುಮತಿ ಪಡೆದಿಲ್ಲ. ಈ ಬಗ್ಗೆ ವಾಯುವಿಹಾರಿಗಳು ಇಲಾಖೆಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪೊಲೀಸ್ ಠಾಣೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಕರಣ ದಾಖಲಿಸಲಾಗಿದೆ. ಶುಲ್ಕ ಪಾವತಿಸಿ ಯಾರೂ ಮೋಸಹೋಗಬಾರದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.