ಬೆಂಗಳೂರು: ವಿವೇಕನಗರದ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ಮೇಘನಾ ಶೆಟ್ಟಿ(27) ಮೃತಪಟ್ಟವರು.

ಮೇಘನಾ ಅವರು ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆ ಗ್ರಾಮದ ಕಲ್ಲುಕೊಪ್ಪ ಗ್ರಾಮದ ಸುದೀಪ್ ಶೆಟ್ಟಿ(30) ಅವರೊಂದಿಗೆ ವಿವಾಹ ಆಗಿತ್ತು. ದಂಪತಿಗೆ ಒಂದು ವರ್ಷದ ಹೆಣ್ಣು ಮಗುವಿದೆ.

ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮೇಘನಾ ಅವರ ಪೋಷಕರು ದೂರು ನೀಡಿದ್ದು ವಿವೇಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ಇಬ್ಬರೂ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ಈಜಿಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇನ್ನು ಮೇಘನಾ ಶೆಟ್ಟಿ ಪೋಷಕರು ಕೂಡ ಈಜಿಪುರದಲ್ಲಿ ವಾಸವಾಗಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದರು.

‘ದಂಪತಿ ನಡುವೆ ಕೆಲವು ತಿಂಗಳಿಂದ ಕೌಟುಂಬಿಕ ವಿಚಾರವಾಗಿ ಜಗಳ ನಡೆಯುತ್ತಿತ್ತು. ಪತಿ ಸುದೀಪ್, ಮೇಘನಾ ಶೆಟ್ಟಿ ಅವರಿಗೆ ಸಂಬಳವನ್ನು ತನಗೆ ಕೊಡುವಂತೆ ಪೀಡಿಸುತ್ತಿದ್ದರು. ಕಾರು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದರು. ಆದರೆ, ಮೇಘನಾ ನಿರಾಕರಿಸಿದ್ದರು ಎಂದು ಹೇಳಲಾಗಿದೆ. ನಿರಂತರವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಮೇಘನಾ ಶೆಟ್ಟಿ, ಶುಕ್ರವಾರ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೂರು ನೀಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.