ಬೆಂಗಳೂರು: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್ಜಿಯುಎಚ್ಎಸ್) ನೂತನ ಕುಲಪತಿಯನ್ನಾಗಿ ಡಾ.ಎಂ.ಕೆ. ರಮೇಶ್ ಅವರನ್ನು ನೇಮಿಸಲಾಗಿದೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಮೇಶ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ರಮೇಶ್ ಅವರು ಇದುವರೆಗೆ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಾಗಿದ್ದರು.

ಇದೇ ವಿಶ್ವವಿದ್ಯಾಲಯದಲ್ಲಿ ರಮೇಶ್ ಅವರು ಹಂಗಾಮಿ ಕುಲಪತಿಯಾಗಿ ಮತ್ತು ಕುಲಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ದಿನದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯೋಮಿತಿಯಾಗುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೂ ಈ ಹುದ್ದೆಯಲ್ಲಿ ಇರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.