ಬೆಂಗಳೂರು: ‘ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾರ್ಚ್ 7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದರು.

‘ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸಲಾಗುವುದು. ಈ ವಿಚಾರವಾಗಿ ಚರ್ಚಿಸಲು ಸೋಮವಾರ (ಮಾರ್ಚ್ 4) ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ ₹10 ಕೋಟಿ ಅನುದಾನ ನೀಡಲಾಗಿದೆ’ ಎಂದರು.

‘ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿರುವ ಹಿನ್ನೆಲೆಯಲ್ಲಿ ಜಲ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳು ನಿತ್ಯ ಸಭೆ ಮಾಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.