ಬೆಂಗಳೂರು: ‘ವಿದ್ಯುತ್ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಸರ್ಕಾರದ ನಡೆ ವಿರೋಧಿಸಿ ರಾಜ್ಯದಾದ್ಯಂತ ಚಳವಳಿ ನಡೆಸಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಜೋಡಣೆ ಮಾಡಿ, ಖಾಸಗೀಕರಣಗೊಳಿಸುವ ಯತ್ನವನ್ನು ಹಿಂದೆ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರ ಮಾಡಿತ್ತು. ರೈತರ ಹೋರಾಟದಿಂದ ಅದಕ್ಕೆ ಯಶಸ್ಸು ದೊರೆಯಲಿಲ್ಲ’ ಎಂದರು.

‘ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿತ್ತು. ರೈತರ ಪ್ರತಿರೋಧದಿಂದಾಗಿ ಕಾಯ್ದೆಗಳ ವಾಪಸ್ ಜೊತೆಗೆ ಖಾಸಗೀಕರಣವನ್ನು ಕೈಬಿಟ್ಟರು. ಈಗ ರಾಜ್ಯ ಸರ್ಕಾರ ಖಾಸಗೀಕರಣಕ್ಕೆ ಯತ್ನಿಸುತ್ತಿದೆ. ಇದರ ಭಾಗವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ, ಮೀಟರ್ ಅಳವಡಿಕೆಯಂತಹ ಕ್ರಮ ಕೈಗೊಂಡಿದೆ’ ಎಂದರು.

‘ಕೃಷಿಗೆ ಸೋಲಾರ್ ಆಧರಿತ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಪ್ರಚೋದಿಸಲಾಗುತ್ತಿದೆ. ಇದು ಕೂಡಾ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯ ಭಾಗವಾಗಿದೆ. ಸರ್ಕಾರವು ಇಂತಹ ರೈತ ವಿರೋಧಿ ಕ್ರಮಗಳನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮುಖ್ಯ ಲೈನ್‌ಗಳಿಂದಲೇ ವಿದ್ಯುತ್ ಸಂಪರ್ಕ ಪಡೆದು, ಕೃಷಿ ಉದ್ದೇಶಕ್ಕೆ ಬಳಸಲು ರೈತರಿಗೆ ಕರೆ ನೀಡಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.