ಬೆಂಗಳೂರು: ಕೇರಳದಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳದ ನವನೀತ್ ಹಾಗೂ ಶಾನಿಲ್ ಬಾಬು ಬಂಧಿತರು.

ಬಂಧಿತರಿಂದ 975 ಗ್ರಾಂ ಎಂಡಿಎಂಎ ಕ್ರಿಸ್ಟಲ್, 407 ಗ್ರಾಂ ಕೊಕೇನ್, ಎರಡು ತೂಕದ ಯಂತ್ರ, ಎರಡು ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹1.37 ಕೋಟಿ ಎಂಬುದಾಗಿ ಅಂದಾಜಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ವಿಲ್ಸನ್ ಗಾರ್ಡನ್ನ 10ನೇ ಕ್ರಾಸ್ನಲ್ಲಿ ಇರುವ ಹೊಂಬೇಗೌಡ ಆಟದ ಮೈದಾನದಲ್ಲಿ ಆರೋಪಿಯೊಬ್ಬ ಡ್ರಗ್ಸ್ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸ್ ಬಾತ್ಮೀದಾರರೊಬ್ಬರು ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಅದೇ ಸ್ಥಳದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಯಿತು. ಆತನಿಂದ 110 ಗ್ರಾಂ ನಿಷೇಧಿತ ಮಾದಕ ವಸ್ತು ಜಪ್ತಿ ಮಾಡಿಕೊಳ್ಳಲಾಗಿತ್ತು. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನಗಳು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯದಲ್ಲಿ ಮತ್ತೊಬ್ಬ ಆರೋಪಿ ಭಾಗಿ ಆಗಿರುವ ಸುಳಿವು ನೀಡಿದ್ದ’ ಎಂದು ಪೊಲೀಸರು ಹೇಳಿದರು.

‘ಮತ್ತೊಬ್ಬ ಆರೋಪಿಯನ್ನು ಪ್ರಸನ್ನ ದೇವಸ್ಥಾನ ಬಳಿ ವಶಕ್ಕೆ ಪಡೆದು ಬಂಧಿಸಲಾಯಿತು. ಈತನಿಂದ 407 ಗ್ರಾಂ ಕೊಕೇನ್, 865 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದುಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಆರೋಪಿಗಳು ಕೇರಳದಿಂದ ನಗರಕ್ಕೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದರು. ನಗರದಲ್ಲಿ ಕೆಲವು ದಿನ ವಾಸ್ತವ್ಯ ಮಾಡಿ ಗ್ರಾಹಕರಿಗೆ ಡ್ರಗ್ಸ್ ಪೂರೈಸುತ್ತಿದ್ದರು. ತಂದ ಡ್ರಗ್ಸ್ ಖಾಲಿಯಾದ ಮೇಲೆ ಮತ್ತೆ ಕೇರಳಕ್ಕೆ ತೆರಳುತ್ತಿದ್ದರು. ಹಲವು ತಿಂಗಳಿಂದ ಇದೇ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.