ಬೆಂಗಳೂರು: ಹಲವು ದೇಶಗಳಿಂದ ಅಂಚೆಯ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ಅನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಜಪ್ತಿ ಮಾಡಿದ್ದಾರೆ.

‘ಅಂಚೆ ಮೂಲಕ ತರಿಸಿಕೊಂಡಿದ್ದ 28 ಕೆ.ಜಿ ಹೈಡ್ರೊ ಗಾಂಜಾ, 2,569 ಎಲ್ಎಸ್ಡಿ ಸ್ಟ್ರಿಪ್ಸ್, 1 ಕೆ.ಜಿ 618 ಗ್ರಾಂ ಎಂಡಿಎಂಎ ಕ್ರಿಸ್ಟಲ್, 11,908 ಎಕ್ಸ್ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್, 102 ಗ್ರಾಂ ಕೋಕೆನ್, 336 ಗ್ರಾಂ ಚರಸ್, 1 ಕೆ.ಜಿ 217 ಗ್ರಾಂ ಗಾಂಜಾ ಎಣ್ಣೆ, 445 ಗ್ರಾಂ ಮ್ಯಾಥಾಕ್ಲಿನಾ, 11 ಇ–ಸಿಗರೇಟ್, 102 ಎಂಎಲ್ ನಿಕೋಟಿನ್ ಜಪ್ತಿ ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದರು.

‘ಅಂಚೆ ಮೂಲಕ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ಖಚಿತ ಮಾಹಿತಿ ಬಂದಿತ್ತು. ಸಿಸಿಬಿ ಪೊಲೀಸರು ನಿಗಾ ಇರಿಸಿದ್ದರು. ಈ ಸಂಬಂಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಸಿಸಿಬಿ ಠಾಣೆಯಲ್ಲಿ ಒಂದು ಪ್ರಕರಣವನ್ನು ಸೆಪ್ಟೆಂಬರ್ನಲ್ಲಿ ದಾಖಲಿಸಲಾಗಿತ್ತು. ಆಗ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವಿದೇಶದಿಂದ ಡ್ರಗ್ಸ್ ತರಿಸಿಕೊಂಡಿದ್ದ ಮಾಹಿತಿ ಲಭ್ಯವಾಗಿತ್ತು. ಬಳಿಕ ಅಂಚೆ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ತಿಳಿಸಿದರು.

‘ಚಾಮರಾಜಪೇಟೆಯಲ್ಲಿರುವ ಅಂಚೆ ಕಚೇರಿ ಮೇಲೆ ಜಂಟಿ ದಾಳಿ ನಡೆಸಿದಾಗ ಅಮೆರಿಕ, ಬೆಲ್ಜಿಯಂ, ನೆದರ್ಲೆಂಡ್ಸ್ ಸೇರಿದಂತೆ ಇತರೆ ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಪೆಟ್ಟಿಗೆಗಳು ಪತ್ತೆಯಾದವು. ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು. 606 ಪುಟ್ಟ ಪೆಟ್ಟಿಗೆಗಳಲ್ಲಿ ವಿವಿಧ ಮಾದರಿಯ ಮಾದಕವಸ್ತು ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ವಿದೇಶದಿಂದ ಡ್ರಗ್ಸ್ ತರಿಸಿಕೊಂಡು, ಹೆಚ್ಚಿನ ಬೆಲೆಗೆ ನಗರದ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು. ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.