ಬೆಂಗಳೂರು: ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋರಮಂಗಲದ ವೆಂಕಟಾಪುರ ನಿವಾಸಿ ಪ್ರವೀಣ್ ಕುಮಾರ್(26) ಬಂಧಿತ.

ಆರೋಪಿಯಿಂದ ₹ 4 ಲಕ್ಷ ಮೌಲ್ಯದ 12 ಕೆ.ಜಿ ಗಾಂಜಾ, ಒಂದು ಮೊಬೈಲ್ ಫೋನ್, ₹1,600 ನಗದು ಮತ್ತು ಕೃತ್ಯ ಎಸಗಲು ಬಳಸುತ್ತಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

‘ಆರೋಪಿ ಬೇರೆಲ್ಲೂ ಕೆಲಸ ಮಾಡುತ್ತಿರಲಿಲ್ಲ. ಮಾದಕ ವಸ್ತುಗಳ ಮಾರಾಟವನ್ನೇ ವೃತ್ತಿ ಮಾಡಿಕೊಂಡಿದ್ದ. ಇದರಿಂದ ಬಂದ ಹಣದಿಂದ ಮೋಜು ನಡೆಸುತ್ತಿದ್ದ. ಇತ್ತೀಚೆಗೆ ಒಡಿಶಾದಿಂದ ಗಾಂಜಾ ತಂದು ಠಾಣೆ ವ್ಯಾಪ್ತಿಯ ಬನ್ನಪ್ಪ ಉದ್ಯಾನದ ಸಮೀಪ ಗ್ರಾಹಕರಿಗೆ ಪೂರೈಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಈತನ ವಿರುದ್ಧ ಕೋರಮಂಗಲ, ವಿವೇಕನಗರ ಮತ್ತು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣಗಳು ದಾಖಲಾಗಿದ್ದವು. ಆರೋಪಿ ಜೈಲಿಗೂ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ. ಮತ್ತೆ ಅದೇ ಕೃತ್ಯಕ್ಕೆ ಇಳಿದಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.