ಸೋಮವಾರ, 30 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮದ್ಯ ಸೇವಿಸಿ ಚಾಲನೆ: ಶಾಲಾ ವಾಹನ ಜಪ್ತಿ

ನಿಯಮ ಉಲ್ಲಂಘನೆ: 466 ಚಾಲಕರ ವಿರುದ್ಧ ಎಫ್‌ಐಆರ್‌
Published : 30 ಸೆಪ್ಟೆಂಬರ್ 2024, 15:32 IST
Last Updated : 30 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಬೆಂಗಳೂರು: ನಗರ ಸಂಚಾರ ಪೊಲೀಸ್ ಇಲಾಖೆಯಿಂದ ಶಾಲಾ ವಾಹನಗಳ ಚಾಲಕರ ವಿರುದ್ಧ ಸೋಮವಾರ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯ ಸೇವಿಸಿ, ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 3,924 ವಾಹನಗಳ ತಪಾಸಣೆ ಮಾಡಲಾಯಿತು. ಮದ್ಯ ಸೇವಿಸಿ, ವಾಹನ ಚಾಲನೆ ಮಾಡಿದ್ದ 21 ಚಾಲಕರು ಹಾಗೂ ಹೆಚ್ಚುವರಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 445 ಚಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಚಾಲಕರು ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವ ಶಾಲಾ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆ ವಾಹನಗಳ ಪರವಾನಗಿ ರದ್ದು ಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್‌ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲೂ ಈ ರೀತಿಯ ವಿಶೇಷ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು. ಸಂಚಾರ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

835 ಪ್ರಕರಣ ದಾಖಲು: ಸೆ.23ರಿಂದ 29ರ ವರೆಗೆ ನಡೆದ ವಿವಿಧ ಮಾದರಿಯ ವಾಹನಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ್ದ 835 ಚಾಲಕರು ಹಾಗೂ ಸವಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿವಿಧ ಮಾದರಿಯ 60,047 ವಾಹನಗಳನ್ನು ತಪಾಸಣೆ ಮಾಡಲಾಯಿತು ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT