ಬೆಂಗಳೂರು: ‘ಕನಕಪುರದಲ್ಲಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ, ಏಳು ಜನರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಎಚ್ಚರಿಕೆ ನೀಡಿದ್ದಾರೆ.

‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರ ಸ್ವಗ್ರಾಮವಾದ ಕನಕಪುರ ತಾಲ್ಲೂಕಿನ ಮಾಳಗಾಳು ಗ್ರಾಮದ ದಲಿತರ ಕಾಲೊನಿಗೆ ನುಗ್ಗಿ, ಹಲ್ಲೆ ನಡೆಸಿರುವುದು ಖಂಡನೀಯ. ಹಲ್ಲೆಗೊಳಗಾದ ಕುಟುಂಬಸ್ಥರಿಗೆ ಮತ್ತು ಗ್ರಾಮದಲ್ಲಿನ ಪರಿಶಿಷ್ಟ ಸಮುದಾಯದವರಿಗೆ ಪೊಲೀಸ್ ರಕ್ಷಣೆಯನ್ನು ಸರ್ಕಾರ ನೀಡಬೇಕು. ಘಟನಾ ಸ್ಥಳಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಭೇಟಿ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
.ಕನಕಪುರ: ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು.ಕನಕಪುರ | ದಲಿತ ಯುವಕನ ಕೈ ಕಡಿದ ಪ್ರಕರಣ: ನಾಲ್ವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.