ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಗತ್ಯ ಸೇವೆಗಳ ಸಿಬ್ಬಂದಿ (ಎವಿಇಎಸ್) ಮತಚಲಾಯಿಸಲು ಅನುಕೂಲ ಆಗುವಂತೆ ನಗರ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,348 ಅಗತ್ಯ ಸೇವೆಗಳ ಸಿಬ್ಬಂದಿ ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಏ.19ರಿಂದ 21ರವರೆಗೆ ಮೂರು ದಿನ ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಕಚೇರಿ, ಕೊಠಡಿ ಸಂಖ್ಯೆ 17, ನೆಲ ಮಹಡಿ, ಬಿಬಿಎಂಪಿ ಕೇಂದ್ರ ಕಚೇರಿ, ನರಸಿಂಹ ರಾಜ ವೃತ್ತ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳ ಕಚೇರಿ, ವಲಯ ಆಯುಕ್ತರ(ದಕ್ಷಿಣ) ಕಾರ್ಯಾಲಯ, 2ನೇ ಮಹಡಿ, ಮಹಾನಗರ ಪಾಲಿಕೆ ಕಚೇರಿಗಳ ಸಂಕೀರ್ಣ, 9ನೇ ಕ್ರಾಸ್, 2ನೇ ಬ್ಲಾಕ್, ಜಯನಗರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೇಂದ್ರ ಸಂಘ ಕಟ್ಟಡ, ಸಭಾಂಗಣ, ನೆಲಮಹಡಿ, ಕಂದಾಯ ಭವನ ಹಿಂಬಾಗ, ಕೆ.ಜಿ ರಸ್ತೆ ಇಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.