ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ವಿನೋದ್ ರಾಥೋಡ್ ಎಂಬುವವರು ಗಾಯಗೊಂಡಿದ್ದಾರೆ. ಮನೆಯ ಗೋಡೆಗಳು ಕುಸಿದುಬಿದ್ದಿವೆ.

‘ಭದ್ರಪ್ಪ ಬಡಾವಣೆಯ 5ನೇ ಅಡ್ಡರಸ್ತೆ ನಿವಾಸಿ ವಿನೋದ್ ಮನೆಯಲ್ಲಿ ಸೋಮವಾರ ಸ್ಫೋಟ ಸಂಭವಿಸಿದೆ. ಗಾಯಗೊಂಡಿರುವ ವಿನೋದ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ಹೇಳಿದರು.

‘ಅಡುಗೆ ಕೋಣೆಯಲ್ಲಿ ಬೆಳಿಗ್ಗೆಯಿಂದಲೇ ನಿಧಾನವಾಗಿ ಅನಿಲ ಸೋರಿಕೆಯಾಗುತ್ತಿತ್ತು ಎಂಬುದು ಗೊತ್ತಾಗಿದೆ. ಇದು ವಿನೋದ್ ಗಮನಕ್ಕೆ ಬಂದಿರಲಿಲ್ಲ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಏಕಾಏಕಿ ಸ್ಫೋಟ ಸಂಭವಿಸಿ, ಬೆಂಕಿ ಹೊತ್ತಿಕೊಂಡಿತ್ತು. ವಿನೋದ್ ಅವರಿಗೆ ಬೆಂಕಿ ತಾಗಿತ್ತು. ಅವರ ಕೂಗಾಟ ಕೇಳಿ ಮನೆಯೊಳಗೆ ಹೋಗಿದ್ದ ಸ್ಥಳೀಯರು, ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.’

‘ಸ್ಫೋಟದಿಂದಾಗಿ ಕೋಣೆಯ ಎರಡು ಗೋಡೆಗಳು ಕುಸಿದು ಬಿದ್ದಿವೆ. ಕೆಲ ಗೋಡೆಗಳು ಬಿರುಕು ಬಿಟ್ಟು ವಾಲಿವೆ. ಅಡುಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ಪೀಠೋಪ
ಕರಣಗಳು ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಘಟನೆ ಬಗ್ಗೆ ಮನೆ ಮಾಲೀಕರಿಂದ ದೂರು ಪಡೆದು ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.