ಬೆಂಗಳೂರು: ನಗರದಲ್ಲಿ ಏ.28ರಂದು ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಆರಂಭವಾಗಿ ನಗರದಲ್ಲಿ ನಡೆಯಲಿರುವ ‘ಟಿಸಿಎಸ್ ವರ್ಲ್ಡ್ 10ಕೆ ರನ್’ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ‘ನಮ್ಮ ಮೆಟ್ರೊ’ ರೈಲು ಸಂಚಾರವನ್ನು ಅಂದು ಬೆಳಿಗ್ಗೆ 3.35ಕ್ಕೆ ಆರಂಭಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.

ನಾಲ್ಕು ಟರ್ಮಿನಲ್ಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಅಂದು ಬೆಳಿಗ್ಗೆ 3.35ಕ್ಕೆ ಆರಂಭಗೊಳ್ಳಲಿದ್ದು, ಬೆಳಿಗ್ಗೆ 4.25ರ ವರೆಗೆ ಪ್ರತಿ 10 ನಿಮಿಷಕ್ಕೊಂದು ರೈಲು ಸಂಚರಿಸಲಿದೆ. ಮೆಜೆಸ್ಟಿಕ್ನಿಂದ ಎಂ.ಜಿ. ರಸ್ತೆ ಕಡೆಗೆ ಬೆಳಿಗ್ಗೆ 4.10ರಿಂದ 5 ಗಂಟೆವರೆಗೆ ಪ್ರತಿ 10 ನಿಮಿಷಕ್ಕೊಂದು ರೈಲು ಸಂಚರಿಸಲಿದೆ.

ಬಳಿಕ ಜನದಟ್ಟಣೆಗೆ ಅನುಗುಣವಾಗಿ ರೈಲುಗಳು ಸಂಚರಿಸಲಿವೆ. ಸಾರ್ವಜನಿಕರು ನಗದು ರಹಿತ ಕ್ಯುಆರ್ ಟಿಕೆಟ್ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿಎಂಆರ್ಸಿಎಲ್ ಕೋರಿದೆ.

ಸಾಮಾನ್ಯ ದಿನಗಳಲ್ಲಿ ಭಾನುವಾರ ಬೆಳಿಗ್ಗೆ 7ಕ್ಕೆ ಮೆಟ್ರೊ ರೈಲು ಸಂಚಾರ ಆರಂಭವಾಗುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.