ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ರೈತ ಸಂಘ, ಹಸಿರು ಸೇನೆ ಪ್ರತಿಭಟನೆ

ಕೈಗಾರಿಕೆಗಳಿಗಾಗಿ ಜಮೀನು ಸ್ವಾಧೀನ: ಅಧಿಸೂಚನೆ ರದ್ದತಿಗೆ ಆಗ್ರಹ
Published 25 ಜುಲೈ 2024, 16:10 IST
Last Updated 25 ಜುಲೈ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಹದಿಮೂರು ಗ್ರಾಮಗಳ ಸುಮಾರು 2,823 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಗುರುವಾರ ಪ್ರತಿಭಟನೆ ನಡೆಸಿತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ನೂರಾರು ರೈತರು ಪಾಲ್ಗೊಂಡಿದ್ದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿ ವ್ಯಾಪ್ತಿಯಲ್ಲಿರುವ ತೊಟ್ಲಗಾನಹಳ್ಳಿ, ಅರಿಕೆರೆ, ಬಸವಾಪಟ್ಟಣ, ಹೊಸಪೇಟೆ, ಚೊಕ್ಕೊಂಡಹಳ್ಳಿ, ಯದ್ದಲುತಿಪ್ಪೇನಹಳ್ಳಿ, ಕೊಲಿಮೆಹೊಸೂರು, ನಡಪನಾಯಕನಹಳ್ಳಿ, ತಾದೂರು, ಯಣ್ಣಂಗೂರು, ದೇವಗಾನಹಳ್ಳಿ, ಗೊಲ್ಲಹಳ್ಳಿ, ಸಂಜೀವಪುರ ಗ್ರಾಮಗಳ ಜನರಿಗೆ ಕೃಷಿಯೇ ಮೂಲ ಆಧಾರವಾಗಿದೆ. ಜೀವನೋಪಾಯಕ್ಕಾಗಿ ಉಳಿಸಿಕೊಂಡಿರುವ ಒಂದು ಅಥವಾ ಎರಡು ಎಕರೆ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡರೆ ಸಾವಿರಾರು ಕುಟುಂಬಗಳು ಬೀದಿ ಪಾಲಾಗುತ್ತವೆ ಎಂದು ಅಳಲು ತೋಡಿಕೊಂಡರು.

ಜಂಗಮಕೋಟೆ ಹೋಬಳಿಯಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಬೆಳೆಯಲಾಗುತ್ತಿದ್ದು, ಅವುಗಳನ್ನು ವಿದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಇದರಿಂದ ಸಾಕಷ್ಟು ಮಂದಿಗೆ ಉದ್ಯೋಗ ಅವಕಾಶ ದೊರೆತಿದೆ. ಅಲ್ಲದೆ ಹೈನುಗಾರಿಕೆ ಅವಲಂಬಿಸಿ ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಆದ್ದರಿಂದ ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT