ಬೆಂಗಳೂರು: ನೀರಿನ ಸಂಪ್ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಅಪ್ಪ ಹಾಗೂ ಮಗ ಅಸುನೀಗಿದ್ದಾರೆ. ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜು (36) ಹಾಗೂ ಅವರ ಮಗ ಸಾಯಿ (10) ಮೃತಪಟ್ಟವರು.

‘ಸುಲ್ತಾನ್ ಪಾಳ್ಯ ಬಳಿ ಇರುವ ರಾಮಕೃಷ್ಣ ವಸತಿ ಸಮುಚ್ಚಯದಲ್ಲಿ ರಾಜು ಅವರು ಬುಧವಾರ ಬೆಳಿಗ್ಗೆ ಸಂಪ್ ಸ್ವಚ್ಛಗೊಳಿಸಲು ತೆರಳಿದ್ದರು. ಜೊತೆಗೆ ಮಗನನ್ನೂ ಕರೆದುಕೊಂಡು ಹೋಗಿದ್ದರು. ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತಂದೆಯ ಚೀರಾಟ ಕಂಡ ಸಾಯಿ, ಅವರ ಬಳಿ ಓಡಿ ಹೋಗಿದ್ದಾನೆ. ಈ ವೇಳೆ ಆತನಿಗೂ ವಿದ್ಯುತ್ ತಗುಲಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ವಸತಿ ಸಮುಚ್ಚಯದ ಮಾಲೀಕರ ನಿರ್ಲಕ್ಷ್ಯವೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.